Advertisement

ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು: ಕುಮಾರಸ್ವಾಮಿ ಗುಡುಗು

11:53 AM Dec 16, 2021 | Team Udayavani |

ಬೆಂಗಳೂರು: ಎಂಇಎಸ್‌ ಪುಂಡರು ಕನ್ನಡ ಧ್ವಜವನ್ನು ಸುಟ್ಟ ಘಟನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದು, ಇದು ಕ್ಷಮೆಗೆ ಅರ್ಹವಾದ ಅಪರಾಧವಲ್ಲ ಎಂದು ಗುಡುಗಿದ್ದರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ ಎಂದಿದ್ದಾರೆ.

ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಹಾಗೂ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next