Advertisement

ರೈತರ ಸಮಸ್ಯೆ ಬಗೆಹರಿಸದೇ ಇದ್ದರೆ ಪರಿಣಾಮ ಭೀಕರವಾಗಿರುತ್ತದೆ: ಕುಮಾರಸ್ವಾಮಿ

09:07 AM Apr 01, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಲಾಕ್ ಡೌನ್ ನಡುವೆ ರಯತರ ಸಮಸ್ಯೆ ಬಗೆಹರಿಸದೇ ಇದ್ದರೆ ಪರಿಣಾಮ ಭೀಕರವಾಗಿರುತ್ತದೆ. ಸರ್ಕಾರ ರೈತರ ರಕ್ಷಣೆಗೆ ತಕ್ಷಣವೇ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ರೈತರ ಸಮಸ್ಯೆ ಬಗೆಹರಿಸದೇ ಹೋದರೆ ಅದರ ಪರಿಣಾಮಗಳು ಭೀಕರವಾಗಿರುತ್ತವೆ ಎಂದು ನಾನು ನಿನ್ನೆಯೇ ಹೇಳಿದ್ದೆ.ಕಲ್ಲಂಗಡಿ ಮಾರಾಟ ಮಾಡಲಾಗದೇ ಕಲಬುರ್ಗಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಆ ಭೀಕರತೆಗೆ ಸಾಕ್ಷಿ.ಸರ್ಕಾರ ರೈತರ ರಕ್ಷಣೆಗೆ ತಕ್ಷಣವೇ ಧಾವಿಸಬೇಕು.ಯುದ್ಧದ ನಡುವೆ ನಮ್ಮವರನ್ನು ನಾವು ರಕ್ಷಿಸಿಕೊಳ್ಳುವುದೇ ನಾಯಕತ್ವ ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಸರಕಾರವನ್ನು ಎಚ್ಚರಿಸಿದ್ದಾರೆ.

ರೈತರ ಉತ್ಪನ್ನಗಳನ್ನು ಸರಕಾರವೇ ಖರೀದಿಸುವ ಕೆಲಸ ಮಾಡಬೇಕು. ನಂತರ ಇದನ್ನು ಬೇಕಾದವರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಸೋಮವಾರ ಟ್ವೀಟ್ ಮಾಡಿದ್ದರು.

ಇಂದು ಬೀದರ್ ನ ಕಲ್ಲಂಗಡಿ ಬೆಳೆಯುವ ರೈತನೋರ್ವ ಕಲ್ಲಂಗಡಿ ಮಾರಲಾಗದೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next