Advertisement

ಆಯುಷ್‌ ಇಲಾಖೆ ಕಾರ್ಯದರ್ಶಿಯ ಹಿಂದಿ ಹೇರಿಕೆ ವಿರುದ್ಧ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ

03:07 PM Aug 23, 2020 | keerthan |

ಬೆಂಗಳೂರು: ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು ಎಂದು ಹೇಳಿರುವ ವಿಚಾರದ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಇದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆ ಎಂದು ಕಿಡಿಕಾರಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಆಯುಷ್ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ,’ ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್‌ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ ಎಂದಿದ್ದಾರೆ.

ಸಂವಿಧಾನ ಬದ್ಧ ‘ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ? ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ಸಭೆಯ ಪ್ರತಿಭಟನೆ ಹಿಂಪಡೆದ ವೈದ್ಯರು

ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next