Advertisement

ಎಚ್ ಡಿಕೆ, ಪ್ರಧಾನಿ ಮೋದಿ ಭೇಟಿ; ಸಾಲಮನ್ನಾ, ಅನುದಾನ ಬಿಡುಗಡೆ ಬಗ್ಗೆ ಚರ್ಚೆ

09:22 AM Jun 18, 2019 | Nagendra Trasi |

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಪ್ರಧಾನಮಂತ್ರಿಯಾಗಿ ಪುನರಾಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು.

Advertisement

ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲ ಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಈ ವರ್ಷವೂ ಬರದ ಛಾಯೆ ಇದ್ದು ಶೇ. 45 ರಷ್ಟು ಮಳೆ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂಂದ್ರ ಸರ್ಕಾರ ರಾಜ್ಯದ ನೆರವಿಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮಹಾತ್ಮಾ ಗಾಂಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರಾಜ್ಯ ಸರ್ಕಾರ ಕೂಲಿಯ ಬಾಬ್ತು ಪಾವತಿಸಿದ 1200 ಕೋಟಿ ರೂ. ಮುಂಗಡ ಹಣವೂ ಸೇರಿದಂತೆ ಸುಮಾರು 1500 ಕೋಟಿ ರೂ. ಅನುದಾನ ಬಾಕಿ ಇದೆ. ಇದನನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಕೋರಿದರು.

ರಾಜ್ಯದಲ್ಲಿ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ, ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗಿದೆ. ರಾಜ್ಯದ ವಾಣಿಜ್ಯ ಬ್ಯಾಂಕುಗಳ 9 ಲಕ್ಷ ಹಾಗೂ ಸಹಕಾರಿ ಬ್ಯಾಂಕುಗಳ 14 ಲಕ್ಷ ಫಲಾನುಭವಿಗಳ ಒಟ್ಟು 12830 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳು ವಿವರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next