Advertisement

ಅಧಿಕಾರದಿಂದ ನಿರ್ಗಮನಕ್ಕೂ ಮುನ್ನ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್ ಕೊಟ್ಟ ಎಚ್ ಡಿಕೆ!

08:45 AM Jul 25, 2019 | Nagendra Trasi |

ಬೆಂಗಳೂರು:ವಿಶ್ವಾಸಮತ ಯಾಚನೆಗೂ ಮುನ್ನ ರಾಜ್ಯ ಸರ್ಕಾರ ಋಣಮುಕ್ತ ಕಾಯ್ದೆಯನ್ನು ಜಾರಿಗೊಳಿಸಿದ್ದು, ಇದರಿಂದ ಕಡಿಮೆ ಭೂಮಿ ಹೊಂದಿದ ರೈತರಿಗೆ ಅನುಕೂಲವಾಗಲಿದೆ. ಈ ಕಾಯ್ದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಂಪರ್ ಗಿಫ್ಟ್ ನೀಡಿದ್ದಾರೆ.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಿಮೆ ಭೂಮಿ ಹೊಂದಿರುವ ರೈತರು ಅಥವಾ ವಾರ್ಷಿಕ 1.20 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿರುವ ರೈತರಿಗಾಗಿ ಋಣಮುಕ್ತ ಕಾಯ್ದೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದವರಿಗೆ ಒನ್ ಟೈಮ್ ರಿಲೀಫ್. 1.20 ಲಕ್ಷ ಆದಾಯ ಹೊಂದಿರುವವರು ಕೈ ಸಾಲ, ಚಿನ್ನ ಅಡವಿಟ್ಟವರು 90 ದಿನದೊಳಗೆ ನೋಡಲ್ ಅಧಿಕಾರಿಯನ್ನು ಭೇಟಿಯಾಗಿ ದಾಖಲೆ ತಂದು ಕೊಟ್ಟದರೆ ಸಾಲಮನ್ನಾ ಆಗಲಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next