Advertisement

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ ಗೆಲವು: ಎಚ್.ಕೆ. ಪಾಟೀಲ್ ವಿಶ್ವಾಸ

04:45 PM Oct 23, 2020 | keerthan |

ಹಾವೇರಿ: ಪಶ್ಚಿಮ ಪದವೀಧರರ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಆರ್.ಎಂ.ಕುಬೇರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ ಪಾಟೀಲ್ ಹೇಳಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅ. 28 ರಂದು ನಡೆಯಲಿರುವ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಆರ್.ಎಂ ಕುಬೇರಪ್ಪ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಅವರು ಯೋಗ್ಯ ಅಭ್ಯರ್ಥಿಯಾಗಿದ್ದಾರೆ. ತಮ್ಮ ಹೋರಾಟಗಳ ಮೂಲಕ ಪ್ರಜ್ಞಾವಂತರ ಮನೆ ಗೆದ್ದಿರುವ ಕುಬೇರಪ್ಪ ಅವರ ಗೆಲುವು ಖಚಿತವೆಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದ ನಾಲ್ಕೂ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಪದವೀಧರರು ಹಾಗೂ ಪ್ರಜ್ಞಾವಂತರ ಅಭಿಪ್ರಾಯ ಸಂಗ್ರಹಮಾಡಿದ್ದೇವೆ, ಪದವಿಧರರ, ಶಿಕ್ಷಕರ, ನಿರುದ್ಯೋಗಿಗಳ ಧ್ವನಿಯಾಗಿರುವ ಆರ್.ಎಂ ಕುಬೇರಪ್ಪ ಅವರು ಜನಪರ ಕಾಳಜಿಯ ವ್ಯಕ್ತಿಯಾಗಿದ್ದಾರೆ. ಅವರನ್ನು ಪ್ರಜ್ಞಾವಂತ ಮತದಾರರು ಬೆಂಬಲಿಸುವ ಮೂಲಕ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ:ಪಶ್ಚಿಮ ಪದವೀಧರ ಕ್ಷೇತ್ರ: ಕಣದಿಂದ ಹಿಂದೆ ಸರಿದ ಕಲ್ಲೂರ, ಪಕ್ಷೇತರ ಅಭ್ಯರ್ಥಿಗೆ JDS ಬೆಂಬಲ

Advertisement

ರಾಜ್ಯದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಸಾವಿರಾರು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಾಶ್ರಿತ ಕೇಂದ್ರಗಳಲ್ಲಿ ಸರಿಯಾದ ಸೌಲಭ್ಯ ಸಿಗುತ್ತಿಲ್ಲ. ಮಳೆಯಿಂದಾಗಿ 40 ಸಾವಿರ ಕೋಟಿಯಷ್ಟು ಬೆಳೆ ಹಾನಿ ಸಂಭವಿಸಿದೆ. ಕಳೆದ ಬಾರಿಯ ನೆರೆ ಹಾವಳಿಯಿಂದ ಜನ ಇನ್ನೂ ಚೇತರಿಸಿಕೊಂಡಿಲ್ಲ. ಸರ್ಕಾರ ಇನ್ನೂ ಅನೇಕ ಕುಟುಂಬಗಳಿಗೆ ಸಮರ್ಪಕ ಪರಿಹಾರ ಒದಗಿಸಿಲ್ಲ ಎಂದು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹರಿಹಾಯ್ದರು.

ಉತ್ತರ ಕರ್ನಾಟಕದ ರೈತರಿಗೆ ಹಾಗೂ ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. 251 ಜನರು ಪ್ರಾಣ ಕಳೆದು ಕೊಂಡಿದ್ದಾರೆ. 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ 40 ಸಾವಿರ ಕೋಟಿ ಹಾನಿಯಾಗಿದೆ. 1 ಲಕ್ಷಕ್ಕೂ ಅಧಿಕ ಮನೆಗಳು ಬಿದ್ದಿವೆ. 10 ಸಾವಿರ ಜನರು ಸಂಪೂರ್ಣ ನಿರಾಶ್ರಿತರಾಗಿದ್ದಾರೆ. ಸರ್ಕಾರದ ಸಚಿವರು, ಅಧಿಕಾರಿಗಳು ನಿಷ್ಕ್ರೀಯರಾಗಿದ್ದಾರೆ. ಸಂಕಷ್ಟ ಅನುಭವಿಸುತ್ತಿರುವ ಜನತೆಯ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next