Advertisement

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

05:09 PM Mar 30, 2023 | Team Udayavani |

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಮಾಜಿ ಸಂಸದ ಹೆಚ್.ಜಿ.ರಾಮುಲು ಕಿರಿಯ ಪುತ್ರ ಎಚ್.ಆರ್.ಚನ್ನಕೇಶವ ಅವರು ಗುರುವಾರ ಮಧ್ಯಾಹ್ನ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

Advertisement

2013 ರಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದ ಎಚ್.ಆರ್.ಚನ್ನಕೇಶವ ನಂತರ ಅವರ ತಂದೆಯವರ ಸೂಚನೆಯಂತೆ ಸಹೋದರ ಎಚ್.ಆರ್.ಶ್ರೀ ನಾಥ ಅವರಿಗೆ ಕಾಂಗ್ರೆಸ್ ಟಿಕೆಟ್ ಬಿಟ್ಟು ಕೊಟ್ಟಿದ್ದರು. ನಂತರ ಬಿಜೆಪಿ ಪಕ್ಷ ಸೇರ್ಪಡೆಯಾಗಿ 2014 ರ ಲೋಕಸಭಾ ಹಾಗೂ 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಹರ ಸಾಹಸ ನಡೆಸಿ ವಿಫಲರಾಗಿದ್ದರು.

ಬಿಜೆಪಿ ಮುಖಂಡರ ರಾಜಿ ಸಂಧಾನದ ನಂತರ ಬಿಜೆಪಿ ಯಲ್ಲಿ ಮುಂದುವರಿದಿದ್ದರು ಪಕ್ಷದ ಯಾವುದೇ ಕಾರ್ಯಕ್ರಮ ಹಾಗೂ ಪಕ್ಷದ ರಾಜ್ಯ ಮುಖಂಡರ ಗಂಗಾವತಿ ಕೊಪ್ಪಳ ಭೇಟಿ ಸಂದರ್ಭದಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ವರ್ತನೆಗೆ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಇಡೀ ಕ್ಷೇತ್ರದಾದ್ಯಂತ ಸಂಚಾರ ಮಾಡಿ ಸಿದ್ಧತೆ ನಡೆಸಿದ್ದರು.

ಈ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಕೇಶವ ಅವರಿಗೆ ದೂರವಾಣಿ ಕರೆ ಮಾಡಿ ಗಂಗಾವತಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಮಾಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಅಧಿಕೃತವಾಗಿ ಪಕ್ಷ ಸೇರಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ,ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ,ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿ ಪಕ್ಷ ಕಲ್ಯಾಣ ಕರ್ನಾಟಕ ಭಾಗದ ಜೆಡಿಎಸ್ ಮುಖಂಡರ ಉಪಸ್ಥಿತಿಯಲ್ಲಿ ಜೆಡಿಎಸ್ ಸೇರಿದ್ದಾರೆ.

Advertisement

ಬಿಜೆಪಿ ಯಿಂದ ಹಿಂದುಳಿದವರಿಗೆ ಮೋಸ

ಬಿಜೆಪಿ ಪಕ್ಷಕ್ಕಾಗಿ ಕಳೆದ ಮೂರು ನಾಲ್ಕು ಚುನಾವಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿದರೂ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗಿದೆ. ಬಿಜೆಪಿ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ವಿರೋಧಿಯಾಗಿದ್ದು ಮೋಸ ಮಾಡುವ ಪಕ್ಷವಾಗಿದೆ. ಗಂಗಾವತಿ ಕ್ಷೇತ್ರದಲ್ಲಿ ಶಾಂತಿ ಭಾವೈಕ್ಯ ಕಾಪಾಡಲು ನಮ್ಮ ತಂದೆ ಹೆಚ್.ಜಿ.ರಾಮುಲು ಕಳೆದ ನಾಲ್ಕು ದಶಕಗಳಿಂದ ಕೆಲಸ ಮಾಡಿದ್ದಾರೆ. ಜನರು ತಮ್ಮ ಕುಟುಂಬದ ಮೇಲೆ ಪ್ರೀತಿ ವಿಶ್ವಾಸವಿಟ್ಟಿದ್ದು ಇದೀಗ ಜೆಡಿಎಸ್ ಪಕ್ಷದ ಮುಖಂಡ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಪಕ್ಷಕ್ಜೆ ಸೇರಿದ್ದು ಗಂಗಾವತಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲಿದ್ದೇನೆ ಎಂದು ಚನ್ನಕೇಶವ ಅವರು ಉದಯವಾಣಿಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next