Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದರು. ಅಲ್ಲದೇ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದರು.
Related Articles
Advertisement
ಸಮನ್ವಯ ಸಮಿತಿಯಲ್ಲಿ ನನಗೆ ಅವಕಾಶವೇ ಕೊಡಲಿಲ್ಲ. ಎಲ್ಲವೂ ಸಿದ್ದರಾಮಯ್ಯನವರ ಅಣತಿಯಂತೆ ನಡೆಯುತ್ತಿತ್ತು. ಸಮನ್ವಯ ಸಮಿತಿ ಕೇವಲ ಹೆಸರಿಗೆ ಮಾತ್ರ ಆಗಿತ್ತು. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ಆಗಲಿಲ್ಲ. ಸಿದ್ದರಾಮಯ್ಯ ಕೈಗೊಂಬೆಯಂತೆ ಕಾರ್ಯನಿರ್ವಹಿಸುವ ಸ್ಥಿತಿ ಬಂದಿತ್ತು ಎಂದು ರಾಜೀನಾಮೆ ಪತ್ರದಲ್ಲಿ ವಿಶ್ವನಾಥ್ ಕಿಡಿಕಾರಿದ್ದಾರೆ.
ಸರ್ಕಾರ ನಡೆಸುವ ಪ್ರಾಮಾಣಿಕ ಪ್ರಯತ್ನ ನಡೆಯಲಿಲ್ಲ. ಎರಡೂ ಪಕ್ಷಗಳ ನಡುವೆ ಸಮನ್ವಯ ಸಾಧಿಸುವಲ್ಲಿ ವಿಫಲ. ಜೆಡಿಎಸ್ ಅಧ್ಯಕ್ಷನಾಗಿದ್ದರೂ ಸಮನ್ವಯ ಸಮಿತಿಯಲ್ಲಿ ನನಗೆ ಸ್ಥಾನ ಕೊಡಲಿಲ್ಲ. ದಿನೇಶ್ ಗುಂಡೂರಾವ್ ಅವರಿಗೂ ಅವಕಾಶ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.