Advertisement

ನಿಮಗೆ ನಾಚಿಕೆ ಅಗೋದಿಲ್ವಾ?: ಆರ್ ಎಸ್ಎಸ್ ಮುಖಂಡರ ವಿರುದ್ಧ ವಿಶ್ವನಾಥ್ ಆಕ್ರೋಶ

01:14 PM Jun 07, 2022 | Team Udayavani |

ಮೈಸೂರು: ಕರ್ನಾಟಕದ ಶಾಂತಿಯನ್ನು ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮೂಲಕ ಕದಡಲಾಗುತ್ತಿದೆ. ರಾಜ್ಯದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿಸಿರುವ ನಿಮಗೆ ನಾಚಿಕೆ ಅಗೋದಿಲ್ವಾ ಎಂದು ಆರ್ ಎಸ್ಎಸ್ ಮುಖಂಡರ ವಿರುದ್ಧ ಮಾಜಿ ಸಚಿವ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

Advertisement

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಕ್ತಾರರು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ನಾಯಕರು ಇದಕ್ಕೆ ಕಡಿವಾಣ ಹಾಕಬೇಕು. ಈ ಬಗ್ಗೆ ಆರ್ ಎಸ್ಎಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಬೇಕು. ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದನ್ನು ನಿಲ್ಲಿಸಿಯೆಂದು ಹೇಳಬೇಕು ಎಂದರು.

ಮಸೀದಿಗಳಿಗೆ ಸಂಬಂಧಿಸಿದಂತೆ ಇರುವ ವಿವಾದಗಳನ್ನು ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅವರ ಹೇಳಿಕೆಯ ಹಿಂದೆ ಒಳ್ಳೆಯ ಉದ್ದೇಶವಿದೆ. ಮೋಹನ್ ಭಾಗವತ್ ಹೇಳಿಕೆಯನ್ನು ಕಟ್ಟರ್ ಆರ್ ಎಸ್ಎಸ್ ವಾದಿಗಳು ಏಕೆ ಸ್ವಾಗತಿಸುತ್ತಿಲ್ಲ. ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಯಾಕೆ ತುಟಿ ಬಿಚ್ಚುತ್ತಿಲ್ಲ. ಹಾಗಾದರೆ ನೀವು ಮೋಹನ್ ಭಾಗವತ್ ಹೇಳಿಕೆಯನ್ನು ವಿರೋಧಿಸುತ್ತೀರಾ? ಭಾಗವತ್ ಕುಣಿಯುವುದನ್ನು ನಿಲ್ಲಿಸಿ ಎಂದರೂ ನೀವು ಏಕೆ ಕುಣಿಯುತ್ತಿದೀರಾ? ಬೆಂಕಿ ಹಚ್ಚುವುದನ್ನು ನಿಲ್ಲಿಸಿ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಆದರೂ ನೀವು ಬೆಂಕಿ ಹಚ್ಚುವುದನ್ನು ನಿಲ್ಲಿಸುತ್ತಿಲ್ಲ ಎಂದರು.

ಇದನ್ನೂ ಓದಿ:ಮತ್ತೆ ಮೈತ್ರಿ?: ಕಾಂಗ್ರೆಸ್‌ಗೆ ಓಪನ್ ಆಫರ್ ಇಟ್ಟ ಎಚ್.ಡಿ.ಕುಮಾರಸ್ವಾಮಿ

ಸದ್ಯಕ್ಕೆ ರಾಜ್ಯದ ಪರಿಸ್ಥಿತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲಿ ಆಡಳಿತದಲ್ಲಿರುವುದು ಬಿಜೆಪಿ ಸರ್ಕಾರವೇ ಹೊರತು, ಆರ್ ಎಸ್ಎಸ್ ಸರ್ಕಾರವಲ್ಲ. ನಾವು 17 ಮಂದಿ ಬಿಜೆಪಿ ಸರ್ಕಾರ ಬೆಂಬಲಿಸಿ ಬಂದವರು. ನಾವು ಆರ್ ಎಸ್ ಎಸ್ ಬೆಂಬಲಿಸಿ ಬಂದವರಲ್ಲ ಎಂದು ಎಂಎಲ್ ಸಿ ವಿಶ್ವನಾಥ್ ಹೇಳಿದರು.

Advertisement

ಪ್ರತಾಪ್ ಸಿಂಹ ಓರ್ವ ಅಯೋಗ್ಯ. ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು. ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಪ್ರಾಕ್ಟೀಸ್ ಮಾಡಿದ್ದೇವೆ. ಬಾಯಿಗೆ ಬಂದಂಗೆ ಮಾತನಾಡ್ತಾನೆ. ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಎನ್ನುತ್ತಾನೆ. ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ. 2014 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ನಾನು ಸೋಲುತ್ತಿರಲಿಲ್ಲ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next