ಮೈಸೂರು : ಯಡಿಯೂರಪ್ಪರ ಆರೋಗ್ಯ ಸರಿಯಿಲ್ಲ. ಅವರ ಆರೋಗ್ಯ ಸರಿಯಾಗಬೇಕು. ಅದರ ಜೊತೆ ರಾಜ್ಯದ ಆಡಳಿತದ ಆರೋಗ್ಯವು ಸರಿಯಾಗಬೇಕು. ಇದಕ್ಕಾಗಿ ಹೈಕಮಾಂಡ್ ಶೀಘ್ರವೇ ಒಂದು ತೀರ್ಮಾನ ಕೈಗೊಳ್ಳಬೇಕು ಎಂದು ಪರೋಕ್ಷವಾಗಿ ನಾಯಕತ್ವ ಬದಲಾವಣೆಗೆ ಪುಷ್ಠಿ ಕೊಟ್ಟಂತೆ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲ ಇದೆ. ಕೆಲವರು ದೆಹಲಿಗೆ ಹೋಗಿದ್ದಾರೆ. ಇನ್ನು ಕೆಲವರು ಹೇಳಿಕೆ ಕೊಡ್ತಿದ್ದಾರೆ.
ಈ ಮಧ್ಯೆ ಯಡಿಯೂರಪ್ಪನವರು ಏನೂ ಮಾತನಾಡುತ್ತಿಲ್ಲ.
ಯಾರು ಏನೇ ಮಾಡಿದ್ರು ತೀರ್ಮಾನ ಮಾಡೋದು ಹೈಕಮಾಂಡ್. ಹಾಗಾಗಿ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತೆ ಅಂತ ವಿಶ್ವಾಸ ಹೊಂದಿದ್ದೇವೆ ಎಂದು ಮೈಸೂರಿನಲ್ಲಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.