Advertisement

ದೇವರಾಜ್ ಅರಸ್ ಹೆಸರಿನಲ್ಲಿ ಹುಣಸೂರು ಪ್ರತ್ಯೇಕ ಜಿಲ್ಲೆಗೆ ಎಚ್. ವಿಶ್ವನಾಥ್ ಬೇಡಿಕೆ

01:50 PM Nov 27, 2020 | keerthan |

ಬೆಂಗಳೂರು: ವಿಜಯನಗರ ನೂತನ ಜಿಲ್ಲೆ ರಚನೆ ಬೆನ್ನಲ್ಲೇ ಹುಣಸೂರು ಪ್ರತ್ಯೇಕ ಜಿಲ್ಲೆಗೆ ಬೇಡಿಕೆ ಆರಂಭವಾಗಿದ್ದು, ದೇವರಾಜ್ ಅರಸ್ ಹೆಸರಿನಲ್ಲಿ ಹುಣಸೂರನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ಹುಣಸೂರು ಜಿಲ್ಲೆ ಮಾಡಿ ಎಂದು ಬೇಡಿಕೆ ಇಟ್ಟಿದ್ದೆವು. ಆರು ತಾಲ್ಲೂಕು ಸೇರಿ ದೇವರಾಜ್ ಅರಸ್ ಹೆಸರಿನಲ್ಲಿ ಜಿಲ್ಲೆ ಮಾಡಿ ಎಂದು ಬೇಡಿಕೆ ಇರಿಸಿದ್ದೆವು ಎಂದಿದ್ದಾರೆ.

ಮೈಸೂರು ನಗರದ ಒತ್ತಡ ಕಾರಣದಿಂದ ಜಿಲ್ಲಾಧಿಕಾರಿ ಹುಣಸೂರು ಭಾಗಕ್ಕೆ ಅಪರೂಪಕ್ಕೆ ಬರುತ್ತಾರೆ. ಹೀಗಾಗಿ ಹುಣಸೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ವಿಶ್ವನಾಥ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ನೂತನ ವಿಜಯನಗರ ಜಿಲ್ಲೆಗೆ ಆರು ತಾಲೂಕುಗಳು ಸೇರ್ಪಡೆ: ಹೊಸಪೇಟೆ ಜಿಲ್ಲಾಕೇಂದ್ರ

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ದೆಹಲಿ ಮಟ್ಟದ ಪಕ್ಷಗಳು. ಯಾವಾಗ ಅಲ್ಲಿಂದ ಅನುಮತಿ ಸಿಗುತ್ತದೆ ಅವಗ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದರು.

Advertisement

ಕುರುಬ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮೂರು ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಿ ಎಂದು ಮನವಿ ಮಾಡಲಾಗಿದೆ. ಕುರುಬ ಅಭಿವೃದ್ಧಿ ಪ್ರಾಧಿಕಾರ ರಚನೆ  ಮಾಡಿ 500 ಕೋಟಿ ನೀಡಬೇಕು ಮತ್ತು ಕುರುಬ ಸಮುದಾಯದ ಬೈರತಿ ಬಸವರಾಜುಗೆ ಸಚಿವ ಸ್ಥಾನ ನೀಡಿದ್ದಾರೆ, ಉಳಿದ ಮೂವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆಯಿದೆ ಎಂದು ವಿಶ್ವನಾಥ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next