Advertisement
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ನಾನು ಹೇಳಿದ್ದೆ ಸರಿ, ನಾನು ಮಾಡಿದ್ದೆ ಸರಿ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಶಿಕ್ಷಣ ಇಲಾಖೆ ತುಂಬಾ ಸೂಕ್ಷ್ಮ ಇಲಾಖೆ. ರಾಜ್ಯದ ಪ್ರತಿ ಮನೆಯೂ ಇಲಾಖೆ ವ್ಯಾಪ್ತಿಯಲ್ಲಿದೆ ಎಂದರು.
Related Articles
Advertisement
ಕೇಂದ್ರ ಸರ್ಕಾರವೇ ತೀರ್ಮಾನ ಮಾಡಿ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಕೇಂದ್ರ ಸರ್ಕಾರ ಎಲ್ಲಾ ಯೋಚನೆ ಮಾಡಿ, ಸಲಹೆ ಪಡೆದೆ ತೀರ್ಮಾನ ಮಾಡಿದೆ. ಆದರೆ ರಾಜ್ಯ ಸರ್ಕಾರ ಹಠಕ್ಕೆ ಬಿದ್ದು ಯಾಕೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾಡುತ್ತಿದೆ. ಮೊದಲು ಜೀವ ಉಳಿಸಿಕೊಳ್ಳಿ ಎಂದು ಮೋದಿಯೇ ಹೇಳಿದ್ದಾರೆ ಆದರೆ ರಾಜ್ಯ ಸರ್ಕಾರ ಜೀವ ,ಜೀವನ ಎರಡನ್ನೂ ತೆಗೆಯಲು ಹೊರಟಿದೆ ಎಂದು ವಿಶ್ವನಾಥ್ ಆರೋಪಿಸಿದರು.
ಕಾಸರಗೋಡು ಭಾಗದಲ್ಲಿ ಕನ್ನಡ ನಾಮಫಲಕ ತೆರವು ವಿಚಾರವಾಗಿ ಮಾತನಾಡಿದ ಅವರು, ಕಾಸರಗೋಡು ಜಿಲ್ಲೆ ನಮ್ಮದೇ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಪತ್ರ ಬರೆದು ಸುಮ್ಮನಾಗುವುದಲ್ಲ. ಮಂಜೇಶ್ವರ ಶಾಸಕ ಅಶ್ರಫ್ ಕನ್ನಡದಲ್ಲೇ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಕಾಸರಗೋಡು ಉಳಿವಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.