Advertisement

ಎಚ್‌1 ಎನ್‌1 ಲಕ್ಷಣ : ಸೂಚನೆ

02:50 AM Apr 25, 2019 | Sriram |

ಮಂಗಳೂರು: ಎಚ್‌1ಎನ್‌1 ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಡ ಮಾಡದೆ ಹತ್ತಿರದ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮನವಿ ಮಾಡಿದ್ದಾರೆ.

Advertisement

ಎಚ್‌1 ಎನ್‌1 ಸಾಮಾನ್ಯ ವೈರಸ್‌ ಜ್ವರವಾಗಿದ್ದು, ನಿರ್ದಿಷ್ಟ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗುತ್ತಾರೆ. ತೀವ್ರ ಸ್ವರೂಪದ ಜ್ವರ, ಕೆಮ್ಮು, ಕಫ, ಶೀತ ಮತ್ತು ಗಂಟಲು ಕೆರೆತ, ಮೈಕೈ ನೋವು ವಾಂತಿ ಭೇದಿ, ಉಸಿರಾಟದ ತೊಂದರೆ ಎಚ್‌1 ಎನ್‌1 ಸೋಂಕಿನ ಲಕ್ಷಣಗಳಾಗಿವೆ.

ಸೋಂಕಿತರು ಕೆಮ್ಮಿದಾಗ, ಸೀನಿದಾಗ ವೈರಸ್‌ ಹರಡುತ್ತವೆ. ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಿ, ಕೈಗಳ ಶುಚಿತ್ವ ಸೇರಿದಂತೆ ವೈಯಕ್ತಿಕ ಶುಚಿತ್ವ ಕಾಪಾಡಬೇಕು. ಪೌಷ್ಠಿಕ ಆಹಾರ ಸೇವಿಸುವುದು, ಧಾರಳವಾಗಿ ನೀರು ಕುಡಿಯುವುದು, ಜನ ಸಂದಣಿ ಪ್ರದೇಶಗಳಿಗೆ ಭೇಟಿ ನೀಡುವಾಗ ಸಾಕಷ್ಟು ಮುಂಜಾಗ್ರತೆ ವಹಿಸುವುದು, ಫ‌ೂÉ ತರಹದ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ ಚಿಕಿತ್ಸೆ, ವಿಶ್ರಾಂತಿ ಪಡೆಯುವುದು ಮಾಡಬೇಕು ಎಂದು ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಎಚ್‌1ಎನ್‌1 ಪ್ರಕರಣ ಇಲ್ಲ. ಆದರೂ ಜಾಗೃತಿ ಮೂಡಿಸಲಾಗುತ್ತಿದೆ ಎಂದವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next