Advertisement
2009ರ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 1ರವರೆಗೆ ಸುರಿದ ಭಾರಿ ಮಳೆಯಿಂದಾಗಿ ಮತ್ತು ತುಂಗಭದ್ರಾ ಜಲಾಶಯದಿಂದ 4ಲಕ್ಷ ಕ್ಯೂಸೆಕ್ ನೀರು ಹರಿಯಬಿಟ್ಟಿದ್ದರಿಂದ ಹಚ್ಚೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಟೂರು, ಚಳ್ಳೆಕೂಡೂÉರು, ಹಚ್ಚೊಳ್ಳಿ, ಶ್ರೀಧರಗಡ್ಡೆ, ಹೊನ್ನಾರಹಳ್ಳಿ ಗ್ರಾಮಗಳು ಸಂಪೂರ್ಣವಾಗಿ ಮೂರು ದಿನ ಜಲಾವೃತಗೊಂಡಿದ್ದವು. ಆ ಸಂದರ್ಭದಲ್ಲಿ ಇಡೀ ಗ್ರಾಮಗಳು ಬಿರುಗಾಳಿಗೆ ಸಿಲುಕಿದ ತರಗಲೆಗಳಂತೆ ಇಡೀ ಗ್ರಾಮದ ಮನೆಗಳು ನೆಲಕ್ಕುರುಳಿ ಬಿದ್ದಿದ್ದವು. ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಟೂರು, ಚಳ್ಳೇಕೂಡೂÉರು, ಹಚ್ಚೊಳ್ಳಿ,ಶ್ರೀಧರಗಡ್ಡೆ , ಹೊನ್ನಾರಹಳ್ಳಿ ಮುಂತಾದ ಗ್ರಾಮಗಳನ್ನು ಸ್ಥಳಾಂತರ ಮಾಡಲು ನವಗ್ರಾಮಗಳನ್ನು ನಿರ್ಮಿಸಿಕೊಟ್ಟಿದ್ದು, ಮಾಟೂರು, ಚಳ್ಳೆಕೂಡೂರು ನವಗ್ರಾಮಗಳಲ್ಲಿ ಕಟ್ಟಿರುವ ಆಸರೆ ಮನೆಗಳು ಕಳಪೆಯಾಗಿವೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆದರೂ ಜನ ಅನಿವಾರ್ಯವಾಗಿ ನವಗ್ರಾಮಗಳಿಗೆ ತೆರಳಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ.
Related Articles
Advertisement
ಸಿರುಗುಪ್ಪ: ತಾಲೂಕಿನ ಹಚ್ಚೊಳ್ಳಿ ಗ್ರಾಮದಲ್ಲಿ ಫೆ. 20ರಂದು ತಹಶೀಲ್ದಾರ್, ತಾಪಂ ಇಒ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದು ಗ್ರಾಮದಲ್ಲಿರುವ ಸಮಸ್ಯೆಗಳನ್ನು ಅರಿತು ಆ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಗ್ರಾಮದಲ್ಲಿ ಒಂದು ದಿನ ವಾಸ್ತವ್ಯ ಮಾಡಲಿದ್ದಾರೆ. ಗ್ರಾಮ ವಾಸ್ತವ್ಯದ ಬಗ್ಗೆ ಎಲ್ಲ ತಯಾರಿಯನ್ನು ಅಧಿಕಾರಿಗಳು ಮಾಡಿಕೊಂಡಿದ್ದು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ವೇದಿಕೆ ನಿರ್ಮಿಸಲಾಗುತ್ತಿದ್ದು ಸಾರ್ವಜನಿಕರಿಂದ ಬರುವ ಅಹವಾಲುಗಳನ್ನು ಅಧಿಕಾರಿಗಳು ಸ್ವೀಕರಿಸಲಿದ್ದು ರಾತ್ರಿ ಇಲ್ಲಿರುವ ಬಿಸಿಎಂ ಇಲಾಖೆಯ ವಸತಿನಿಲಯದಲ್ಲಿ ತಹಶೀಲ್ದಾರ್ ಸೇರಿದಂತೆ ತಾಲೂಕುಮಟ್ಟದ ಎಲ್ಲ ಅಧಿಕಾರಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್ ಎಸ್. ಬಿ. ಕೂಡಲಗಿ ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶ ಸಣ್ಣ ಸಣ್ಣ ವಿಚಾರಕ್ಕೂ ಸಾರ್ವಜನಿಕರು ತಾಲೂಕು ಕಚೇರಿಗೆ ಅಲೆದಾಡುವಂತಾಗ ಬಾರದು ಎನ್ನುವ ಉದ್ದೇಶದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಿದ್ದು, ಆಧಾರ್ ಕಾರ್ಡ್ ದೋಷ, ಪಡಿತರ ಚೀಟಿ ವ್ಯತ್ಯಾಸ, ಪೌತಿ ಖಾತೆ ಬದಲಾವಣೆ, ಪಹಣಿ ತಿದ್ದುಪಡಿ, ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಾದ ಪಿಂಚಣಿ ಸೌಲಭ್ಯ, ವೃದ್ಧಾಪ್ಯವೇತನ ಸೌಲಭ್ಯಗಳು ಅರ್ಹರಿಗೆ ಸಿಗದೇ ಇದ್ದರೆ ನೀಡುವ ವ್ಯವಸ್ಥೆ ಮಾಡಲಾಗುವುದು. ಪ್ರ
ವಾಹ, ಬರ ಪರಿಹಾರದ ಬಗ್ಗೆಯೂ ಕ್ರಮ ವಹಿಸಲಾಗುತ್ತದೆ. ಸಾರ್ವಜನಿಕರು ಆ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳ ದೋಷಗಳನ್ನು ಸರಿಪಡಿಸಿಕೊಳ್ಳಲು, ತಿದ್ದುಪಡಿ ಮಾಡಿಕೊಳ್ಳಲು, ಸೌಲಭ್ಯಗಳನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ. ಗ್ರಾಮ ವಾಸ್ತವ್ಯದ ಸೌಲಭ್ಯವನ್ನು ಸ್ಥಳಿಯರು ಪಡೆದುಕೊಳ್ಳಬೇಕೆಂದು ಹೇಳಿದರು.