Advertisement

ಭಯೋತ್ಪಾದನೆಗೆ ಹಣಕಾಸು ನೆರವು ಕೇಸ್; ಹಫೀಜ್ ಸಯೀದ್ ಗೆ 5 ವರ್ಷ ಜೈಲುಶಿಕ್ಷೆ

08:33 AM Feb 13, 2020 | Nagendra Trasi |

ಇಸ್ಲಾಮಾಬಾದ್: ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ 26/11 ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ನನ್ನು ಪಾಕಿಸ್ತಾನ ಕೋರ್ಟ್ ದೋಷಿ ಎಂದು ತೀರ್ಪು ನೀಡಿ ಐದು ವರ್ಷ ಜೈಲುಶಿಕ್ಷೆ ವಿಧಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ತಿಳಿಸಿದೆ.

Advertisement

ಹಫೀಜ್ ಸಯೀದ್ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಸ್ಥಾಪಕ ಮತ್ತು ಜಮಾತ್ ಉದ್ ದಾವಾದ ಮುಖ್ಯಸ್ಥನಾಗಿದ್ದು 2008ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ 166 ಮಂದಿ ಸಾವನ್ನಪ್ಪಿದ್ದ ಘಟನೆ ನಂತರ ಲಷ್ಕರ್ ಎ ತೊಯ್ಬಾ ಹಾಗೂ ಜಮಾತ್ ಮೇಲೆ ವಿಶ್ವಸಂಸ್ಥೆ ನಿಷೇಧ ಹೇರಿತ್ತು.

ಪಾಕಿಸ್ತಾನದಲ್ಲಿಯೇ ಹಫೀಜ್ ಸಯೀದ್ 23 ಭಯೋತ್ಪಾದನಾ ಪ್ರಕರಣಗಳನ್ನು ಎದುರಿಸುತ್ತಿದ್ದು, ಭಾರತ ಕೂಡಾ ಸಯೀದ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಆದರೆ ಪಾಕಿಸ್ತಾನದಲ್ಲಿ ಹಫೀಜ್ ಮುಕ್ತವಾಗಿ ಓಡಾಡಿಕೊಂಡು ಭಾರತ ವಿರೋಧಿ ಸಮಾವೇಶಗಳಲ್ಲಿ ಪಾಲ್ಗೊಳ್ಳಲು ಪಾಕ್ ಸರ್ಕಾರ ಮುಕ್ತ ಅವಕಾಶ ನೀಡಿತ್ತು ಎಂದು ವರದಿ ವಿವರಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next