Advertisement

ಮಲ್ಲಿಗೆ ಬೆಳೆಗಾರರಿಗೆ ಪರಿಹಾರ

12:54 PM May 10, 2020 | Naveen |

ಹಗರಿಬೊಮ್ಮನಹಳ್ಳಿ: ಲಾಕ್‌ ಡೌನ್‌ ವೇಳೆ ಮಾರುಕಟ್ಟೆ ಇಲ್ಲದೆ ಕಂಗಾಲಾಗಿದ್ದ ಮಲ್ಲಿಗೆ ಬೆಳೆಗಾರರ ಪ್ರದೇಶಕ್ಕೆ ಶಾಸಕ ಎಸ್‌. ಭೀಮಾ ನಾಯ್ಕ ಭೇಟಿ ನೀಡಿ, ಪರಿಹಾರಕ್ಕೆ ಆಗ್ರಹಿಸಿರುವುದು ಫಲ ನೀಡಿದೆ ಎಂದು ರೈತಪರ ಹೋರಾಟಗಾರ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ತಿಳಿಸಿದರು.

Advertisement

ಪಟ್ಟಣದ ಸರ್ಕ್ನೂಟ್‌ ಹೌಸ್‌ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೋವಿಡ್ ಪರಿಣಾಮದ ಲಾಕ್‌ಡೌನ್‌ನಿಂದಾಗಿ ಮಲ್ಲಿಗೆ ಬೆಳೆಗಾರರಿಗೆ ಸಿಎಂ ಪ್ರತಿ ಹೆ.ಗೆ 25ಸಾವಿರ ರೂ.ಪರಿಹಾರ ಘೋಷಿಸಿರುವುದು ಸ್ವಾಗತಾರ್ಹ. ಬೆಳೆಗಾರರಿಗೆ ಹೂಡಿದ ಬಂಡವಾಳ ಹಿಂತಿರುಗದ ಸ್ಥಿತಿ ಉಂಟಾಗಿದೆ. ಶಿವಮೊಗ್ಗ ಮಾರುಕಟ್ಟೆಗೆ ಒಟ್ಟು 28ದಿನ ವಾಹನದ ಸೌಲಭ್ಯ ಕಲ್ಪಿಸಿದ್ದಾರೆ. ಶಿವಮೊಗ್ಗ ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಾರುಕಟ್ಟೆ ಸೌಲಭ್ಯ ಕಲ್ಪಿಸಿರುವುದು ರೈತ ಪರವಾಗಿದೆ ಎಂದರು.

ತಾಲೂಕಿನಲ್ಲಿ ಸಿಎಂ ಕ್ರಮದಿಂದಾಗಿ ಒಟ್ಟು 400ಕ್ಕೂ ಹೆಚ್ಚು ಬೆಳೆಗಾರರಿಗೆ ತಾತ್ಕಾಲಿಕ ಪರಿಹಾರ ಒದಗಲಿದೆ ಎಂದರು. ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದನಗೌಡ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸಾಲ ಪಡೆದವರಿಗೆ ಮರುಪಾವತಿಗೆ ಸೂಕ್ತ ಕಾಲಾವಕಾಶ ಕಲ್ಪಿಸಲಿ ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next