Advertisement

ವಿವಿಧ ಬೇಡಿಕೆ ಈಡೇರಿಕೆಗೆ ಸಿಪಿಐಎಂ ಒತ್ತಾಯ

05:08 PM May 21, 2020 | Naveen |

ಹಗರಿಬೊಮ್ಮನಹಳ್ಳಿ: ರಾಜ್ಯದ ಕೃಷಿಕರು, ಕಾರ್ಮಿಕರು, ಬಡವರು, ದಲಿತರು ಹಾಗೂ ಮಹಿಳೆಯರು ಕೋವಿಡ್‌-19 ವೈರಸ್‌ನಿಂದಾಗಿ ಆರ್ಥಿಕ ಬಿಕ್ಕಟ್ಟಿನಲ್ಲಿ ತೊಳಲಾಡುತ್ತಿದ್ದಾರೆ. ಸರಕಾರ ಕೂಡಲೇ ಇವರ ಸಹಾಯಕ್ಕೆ ಬಂದು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಸಂಚಾಲಕ ಆರ್‌.ಎಸ್‌.ಬಸವರಾಜ ಹೇಳಿದರು.

Advertisement

ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಪಿಐಎಂ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಶ್ರೀಮಂತರನ್ನು ಮತ್ತು ಕಾಪೋìರೇಟ್‌ ಕಂಪನಿಗಳನ್ನು ಸಂರಕ್ಷಿಸುತ್ತಿವೆ. ಸಂಕಷ್ಟದಲ್ಲಿರುವವರಿಗೆ ನೆರವು ನೀಡುವಲ್ಲಿ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಹರಿಹಾಯ್ದರು. ಸಿಪಿಐಎಂ ರಾಜ್ಯ ಸಮಿತಿ ಸದಸ್ಯೆ ಬಿ.ಮಾಳಮ್ಮ ಮಾತನಾಡಿ, ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆಗೆ ಮೂಲಕ ಮಾಡಲಾದ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು. ಖಾತ್ರಿಯಡಿ ರಾಜ್ಯಾದ್ಯಂತ ವ್ಯಾಪಕವಾಗಿ ಉದ್ಯೋಗ ಒದಗಿಸಬೇಕು ಎಂದರು.

ಸಿಪಿಐಎಂನ ಕಾರ್ಯದರ್ಶಿ ಎಸ್‌. ಜಗನ್ನಾಥ ಮಾತನಾಡಿ, ಬೆಳೆನಷ್ಟ ಅನುಭವಿಸಿದ ರೈತರ, ಮಹಿಳೆಯರ ಮೈಕ್ರೋ ಫೈನಾನ್ಸ್‌ಗಳಲ್ಲಿನ ಸಾಲ ಮನ್ನಾ ಮಾಡಬೇಕು. ಮಹಿಳೆಯರ ಗುಂಪು ಸಾಲಗಳನ್ನು ಮನ್ನಾ ಮಾಡಬೇಕು. ಬೆಳೆನಷ್ಟ ಪರಿಹಾರವನ್ನು ತಲಾ ಎಕರೆಗೆ 10,000 ರೂಗಳಂತೆ ನೀಡಬೇಕು ಎಂದು ಒತ್ತಾಯಿಸಿದರು. ಸಿಪಿಐಎಂನ ಮುಖಂಡರಾದ ಕೆ.ಗಾಳೆಪ್ಪ, ಮಂಜುನಾಥ, ಸಿ. ಹನುಮಂತ, ಎಂ. ಆನಂದ, ಕೆ. ಬಸವರಾಜ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next