Advertisement
ಮುಂಗಾರು ಹಂಗಾಮಿನಲ್ಲಿ ಏಕದಳ, ದ್ವಿದಳ, ಎಣ್ಣೆಕಾಳುಗಳು ಹಾಗೂ ವಾಣಿಜ್ಯ ಬೆಳೆಗಳು ಸೇರಿದಂತೆ ಒಟ್ಟು 3,58,340 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಇದುವರೆಗೆ 2,24,859 ಹೆಕ್ಟೇರ್ ಬಿತ್ತನೆ ಮಾಡುವ ಮೂಲಕ ಶೇ. 62.8ರಷ್ಟು ಮಾತ್ರ ಬಿತ್ತನೆಯಾಗಿದೆ. ಬಿತ್ತನೆ ಮಾಡಲಾದ ಬೆಳೆಗಳು ಮಳೆ ಕೊರತೆಯಿಂದಾಗಿ ಒಣಗುತ್ತಿವೆ.
ಚಿತ್ರದುರ್ಗ ತಾಲೂಕಿನಲ್ಲಿ 8 ಸಾವಿರ ಹೆಕ್ಟೇರ್ ಬಿತ್ತನೆ ಪೈಕಿ ಕೇವಲ 1109 ಹೆಕ್ಟೇರ್, ಹೊಳಲ್ಕೆರೆ ತಾಲೂಕಿನಲ್ಲಿ 1 ಸಾವಿರ ಹೆಕ್ಟೇರ್‌ಗೆ 182 ಹೆಕ್ಟೇರ್, ಹೊಸದುರ್ಗ ತಾಲೂಕಿನ 2120 ಹೆಕ್ಟೇರ್‌ನಲ್ಲಿ 1841 ಹೆಕ್ಟೇರ್ ಮಾಡಿದ್ದು, ಒಟ್ಟಾರೆ 83,790 ಹೆಕ್ಟೇರ್ ಶೇಂಗಾ ಬಿತ್ತನೆ
ಮಾಡಲಾಗಿದೆ. ಬಿತ್ತನೆ ಮಾಡಿರುವ ಶೇಂಗಾ ಬೆಳೆಗಳು ಒಣಗಿಹೋಗುತ್ತಿವೆ. ಮೆಕ್ಕೆಜೋಳ ಸ್ಪಲ್ಪ ವಾಸಿ: ಚಿತ್ರದುರ್ಗ ಮತ್ತು ಹೊಳಲ್ಕೆರೆ ತಾಲೂಕುಗಳಲ್ಲಿ ಮೆಕ್ಕೆಜೋಳವನ್ನು ವಾಣಿಜ್ಯ ಬೆಳೆಯಾಗಿ ಮತ್ತು ಜಾನುವಾರುಗಳ ಮೇವಿಗಾಗಿ ಹೆಚ್ಚಾಗಿ ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ 88,300 ಹೆಕ್ಟೇರ್ ಮೆಕ್ಕೆಜೋಳ ಬಿತ್ತನೆಗೆ ಇದುವರೆಗೆ 74,738 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಇದ್ದಿದ್ದರಲ್ಲಿ ಮೆಕ್ಕೆಜೋಳದ ಬಿತ್ತನೆ ಸ್ಪಲ್ಪ ವಾಸಿ. ಜಾನುವಾರುಗಳ ಮೇವಿಗಾಗಿ 52,100 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದುವರೆಗೆ ಕೇವಲ 27,321 ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ಹೊಸದುರ್ಗ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ
29,450 ಹೆಕ್ಟೇರ್ ಬಿತ್ತನೆ ಗುರಿಗೆ 1370 ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ಹಿರಿಯೂರಲ್ಲಿ 8 ಸಾವಿರ ಹೆಕ್ಟೇರ್ ಪೈಕಿ 65 ಹೆಕ್ಟೇರ್, ಹೊಳಲ್ಕೆರೆಯಲ್ಲಿ 8 ಸಾವಿರ ಹೆಕ್ಟೇರ್‌ನಲ್ಲಿ 870 ಹೆಕ್ಟೇರ್ ಬಿತ್ತನೆ ಮಾಡಲಾಗಿದೆ.
Related Articles
ಅಲಸಂದೆ, ಅವರೆ ಸೇರಿದಂತೆ ಬೇಳೆಕಾಳುಗಳು ಸೇರಿ 34,660 ಹೆಕ್ಟೇರ್ ಗುರಿ ಹೊಂದಲಾಗಿದ್ದು, ಕೇವಲ 16,016 ಹೆಕ್ಟೇರ್ ಬಿತ್ತನೆಯಾಗಿದೆ.
Advertisement
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳು ಮತ್ತು ಎಣ್ಣೆ ಕಾಳುಗಳು ಬೆಳೆಗಳಾದ ಶೇಂಗಾ, ಸೂರ್ಯಕಾಂತಿ, ಎಳ್ಳು, ಹರಳು, ಹುಚ್ಚೆಳ್ಳು, ಸಾಸುವೆ, ಸೋಯಾಬಿನ್ ಸೇರಿ 1,53,915 ಹೆಕ್ಟೇರ್ ಬಿತ್ತನೆ ಗುರಿಗೆ 85,081 ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ವಾಣಿಜ್ಯ ಬೆಳೆಗಳಾದ ಹತ್ತಿ, ಕಬ್ಬು, ತಂಬಾಕು 13,270 ಹೆಕ್ಟೇರ್ ಬಿತ್ತನೆಯಾಗಬೇಕಿತ್ತು. 8633 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ.
ಕೈ ಕೊಟ್ಟ ವಾಡಿಕೆ ಮಳೆ: ಜಿಲ್ಲೆಯಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಮಳೆ ಕೈಕೊಟ್ಟಿದೆ. ಆಗಸ್ಟ್ ವರೆಗೆ 266 ಮಿಮೀ ವಾಡಿಕೆ ಮಳೆ ಆಗಬೇಕಾಗಿತ್ತು. ಆದರೆ 221 ಮಿಮೀ ಮಳೆಯಾಗಿದ್ದು 17 ಮಿಮೀ ಕೊರತೆಯಾಗಿದೆ. ಮಳೆ ವೈಫಲ್ಯ ಹಾಗೂ ಬೆಳೆ ಒಣಗುತ್ತಿರುವುದರಿಂದ ಅನ್ನದಾತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಬಿತ್ತನೆ ಅವಧಿ ಮುಗಿದಿದ್ದು, ಪರ್ಯಾಯ ಬೆಳೆಯಾಗಿ ರಾಗಿ ಬಿತ್ತನೆ ಮಾಡಬಹುದಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ಇರುವುದರಿಂದ ಬಿತ್ತನೆ ಗುರಿ ಸಾಧಿಸಲು ಆಗುತ್ತಿಲ್ಲ. ಬಿತ್ತನೆ ಮಾಡಲಾದ ಬೆಳೆಗಳಿಗೆ ಮಳೆಯ ಅಗತ್ಯವಿದೆ.ಲಕ್ಷ್ಮಣ ಕಳ್ಳೇನವರ, ಜಂಟಿ ಕೃಷಿ ನಿರ್ದೇಶಕರು. ಕೂನಿಕೆರೆ ಹೋಬಳಿ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಳೆಯೇ ಆಗಿಲ್ಲ. ಹೀಗಾಗಿ ಬಿತ್ತನೆ ಮಾಡಲು ಆಗಿಲ್ಲ. ಬಿತ್ತನೆ ಮಾಡದ ರೈತರಿಗೆ ಸರ್ಕಾರ ಪರಿಹಾರ ನೀಡಬೇಕು.
ಹನುಮಂತಪ್ಪ, ರೈತ, ಮಾಯಸಂದ್ರ.