ಯಲಬುರ್ಗಾ: ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರಿಗೆ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ವೈದ್ಯಕೀಯ ವರದಿಯಾನುಸಾರ ಕೋವಿಡ್ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಅನ್ವಯ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ತಮ್ಮೆಲ್ಲರ ಹಾರೈಕೆಯಿಂದ ಆರೋಗ್ಯವಾಗಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂರ್ಪಕದಲ್ಲಿರುವರು ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಖುದ್ದು ಭೇಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಜನರ ಸಹಕಾರ ಕೋರಿದ್ದಾರೆ. ಈ ಅವಧಿಯಲ್ಲಿ ದೂರವಾಣಿ ಮೂಲಕ ತಾವು ಹಾಗೂ ತಮ್ಮ ಕಚೇರಿ ಸಿಬ್ಬಂದಿ ಜನತೆ ಸೇವೆಗೆ ಸದಾ ಕಾಲ ಲಭ್ಯ ಎಂದು ತಿಳಿಸಿದ್ದಾರೆ. ಎಲ್ಲರೂ ಸೇರಿ ಮುಂಜಾಗೃತೆ ವಹಿಸಿ. ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ವಿರುದ್ದ ಸಂದರ್ಭದಲ್ಲಿ ಜಯವನ್ನು ಸಾಧಿಸೋಣ ಎಂದು ಕರೆ ನೀಡಿದ್ದಾರೆ.
ಈ ಕುರಿತು ಉದಯವಾಣಿ ಜೊತೆ ಮಾತನಾಡಿದ ಅವರು, ತಾಲೂಕಿನ ಜನತೆ ಆತಂಕ ಪಡುವ ಅಗತ್ಯವಿಲ್ಲ, ತಾವೆಲ್ಲರೂ ಸುರಕ್ಷತೆಯಿಂದ ಇರಿ, ಪ್ರತಿಯೊಬ್ಬರು ಮಾಸ್ಕ್ ಧರಿಸಿ ಓಡಾಡಿ ಎಂದು ಮನವಿ ಮಾಡಿದ್ದಾರೆ.
ಸೀಲಡೌನ್ ಸಾಧ್ಯತೆ:ಶಾಸಕರ ಕಚೇರಿ ಸೇರಿದಂತೆ ಕಚೇರಿ ಸೀಲಡೌನ್ ಆಗುವ ಸಾಧ್ಯತೆಗಳು ಹೆಚ್ಚಿವೆ.