Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳು ಗಣಿಗಾರಿಕೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
Related Articles
Advertisement
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ನವೀನ್ ಯು. ಜಿಲ್ಲೆಯಲ್ಲಿ 554 ತೀವ್ರ ಅಪೌಷ್ಟಿಕತೆ ಮತ್ತು 23,119 ಸಾಧಾರಣ ಕಡಿಮೆ ತೂಕದ ಮಕ್ಕಳಿದ್ದು, ಒಟ್ಟು 23,673 ಅಪೌಷ್ಟಿಕ ಮಕ್ಕಳಿದ್ದಾರೆ. ಈ ಪೈಕಿ ತೀವ್ರ ಅಪೌಷ್ಟಿಕತೆ ಇರುವ ಮಕ್ಕಳಿಗೆ ಸಿರಿಧಾನ್ಯಗಳ ಪುಡಿ ನೀಡುತ್ತಿದ್ದು, ಎಲ್ಲ 554 ಮಕ್ಕಳು ಸೇವಿಸುತ್ತಿದ್ದು, ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಚಿವರು ಸಿರಿಧಾನ್ಯಗಳ ಪುಡಿ ಇರುವ ಡಬ್ಬಿಯನ್ನು ಸ್ವತಃ ಪರಿಶೀಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶಹಾಬಾದ ತಾಲೂಕಿನಲ್ಲಿ ಗರ್ಭಿಣಿ ಹಾಗೂ ಬಾಣಂತಿಯವರ ಲಸಿಕಾಕರಣ ಮಾಹಿತಿ ಕೇಳಲಾಗಿ, ಗರ್ಭಿಣಿಯರ ಲಸಿಕಾಕರಣ ಶೇಕಡಾ 73.05 ಹಾಗೂ ಬಾಣಂತಿಯರದ್ದು ಶೇ. 62.18ರಷ್ಟು ಆಗಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ 171 ಬಾಲ್ಯ ವಿವಾಹದ ಯತ್ನಗಳಲ್ಲಿ 165 ತಡೆದಿದ್ದು ಪ್ರಶಂಸನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮದುವೆಯಾಗಿರುವ ಆರು ಪ್ರಕರಣಗಳಲ್ಲಿ ಕೇವಲ ಮೂರು ಕೇಸುಗಳಲ್ಲಿ ಎಫ್‌ಐಆರ್ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪೊಲೀಸರೇ ಸ್ವಯಂಕೃತವಾಗಿ ಈ ಪ್ರಕರಣಗಳಲ್ಲಿ ಕೇಸು ದಾಖಲಿಸಬೇಕು. ಒಂದು ವೇಳೆ ದಾಖಲಿಸದಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳೇ ಪೊಲೀಸರಿಗೆ ವರದಿ ಸಲ್ಲಿಸಿ ಕೇಸು ದಾಖಲಿಸಬೇಕು ಎಂದು ಕಟ್ಟಪ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕಾಡಾ ಭೀಮರಾಯನಗುಡಿ ಅಧ್ಯಕ್ಷ ಶರಣಪ್ಪ ತಳವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಂಕಜ ಕುಮಾರ ಪಾಂಡೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ರೇಜು ಎಂ.ಟಿ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ| ದಿಲೀಷ ಸಾಸಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಇಶಾ ಪಂತ್, ಡಿಸಿಪಿ ಅಡೂರು ಶ್ರೀನಿವಾಸಲು, ಸಹಾಯಕ ಆಯುಕ್ತರಾದ ಮೋನಾ ರೊಟ್, ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ| ನಂದನ ಕುಮಾರ ಜೆ.ವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಗೀತಾ ಪಾಟೀಲ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಡಾ| ಲಕ್ಷಮ್ಮ, ಮೋಹನ ಮುಂತಾದವರು ಇದ್ದರು.