Advertisement
ಸಂಸದೆ ಶೋಭಾ ಕರಂದ್ಲಾಜೆ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸಾಗರ ಕ್ಷೇತ್ರದ ಸ್ಥಿತಿಗತಿ, ಲೆಕ್ಕಾಚಾರದ ಬಗ್ಗೆ ಹಾಲಪ್ಪ ಆವರಿಗೆ ಮನವರಿಕೆ ಮಾಡಿಕೊಟ್ಟು ನಿಮಗೆ ಟಿಕೆಟ್ ಕೊಟ್ಟರೆ ಗೆಲುವು ಕಷ್ಟ ಎಂಬುದು ಪಕ್ಷ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಸ್ಪರ್ಧೆ ಮಾಡದೆ ಪಕ್ಷದ ಅಭ್ಯರ್ಥಿ ಯಾರೇ ಆದರೂ ಕೆಲಸ ಮಾಡಿ , ಮುಂದೆ ಭವಿಷ್ಯ ಇದೆ ಎಂದು ಭರವಸೆ ನೀಡಿದರು.
Related Articles
Advertisement
ಬಿಜೆಪಿ ಪರ ಪ್ರಚಾರ ನಡೆಸುವಿರಾ? ಬೇರೆ ಪಕ್ಷ ಸೇರುವಿರಾ ಎಂಬ ಪ್ರಶ್ನೆಗೆ ಎಂಬ ಪ್ರಶ್ನೆಗೆ ಉತ್ತರಿಸದ ಹಾಲಪ್ಪ, ಕಾಂಗ್ರೆಸ್‌ನ ಹಲವು ನಾಯಕರ ಪರಿಚಯವಿದೆ. ಕಾಗೋಡು ತಿಮ್ಮಪ್ಪ ಅವರು ದೂರವಾಣಿ ಮೂಲಕ ವಿಚಾರಿಸಿದರು. ಟಿಕೆಟ್ ವಿಚಾರಕ್ಕೆ ಬೇಸರವಾಗಿತ್ತು. ದೇವಸ್ಥಾನಕ್ಕೆ ಹೋಗಿ ಬಂದ ಬಳಿಕ ಬೇಸರ ಕಡಿಮೆಯಾಗಿದೆ. ನಾನು ಬೇರೆಯವರಂತೆ ಮುತ್ಸದ್ಧಿ ರೀತಿ ಮಾತನಾಡುವುದಿಲ್ಲ ಎಂದು ತಿಳಿಸಿದರು.
ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಹಾಲಪ್ಪ ಬದ್ಧರಾಗಿರಲಿದ್ದಾರೆ. ಅವರ ಕಷ್ಟ ಸುಖಗಳಲ್ಲಿ ನಾವು ಜೊತೆಯಲ್ಲಿದ್ದೇವೆ. ಅವರು ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎಂಬ ನಂಬಿಕೆ ಇದೆ. ಮಂಗಳವಾರದಿಂದ ಕ್ಷೇತ್ರದಲ್ಲಿ ಹಾಲಪ್ಪ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.– ಸಂಸದೆ ಶೋಭಾ ಕರಂದ್ಲಾಜೆ