Advertisement

ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ ; ಶಾಸಕ ಹಾಲಪ್ಪ ಮನವಿ

03:35 PM Feb 17, 2022 | Team Udayavani |

ಸಾಗರ: ಕ್ಷೇತ್ರವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುವಂತೆ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಬುಧವಾರ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Advertisement

ಗ್ರಾಮೀಣ ಪ್ರದೇಶದಲ್ಲಿ ಮೆಸ್ಕಾಂ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಹೊತ್ತಲ್ಲದ ಹೊತ್ತಿನಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದು, ಅನಿಯಮಿತ ವಿದ್ಯುತ್ ಪೂರೈಕೆ, ತಡರಾತ್ರಿ ತ್ರೀಫೇಸ್ ನೀಡುವಂತಹ ಕೆಲಸ ಮೆಸ್ಕಾಂ ಅಧಿಕಾರಿಗಳು ಮಾಡುತ್ತಿದ್ದಾರೆ. ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸುವಂತೆ ಆಗಿದ್ದು, ಬೇಸಿಗೆ ಸಮೀಪಿಸುತ್ತಿರುವುದರಿಂದ ರೈತರು ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಇಲ್ಲದೆ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ. ಇದರಿಂದ ರೈತರು ತಮ್ಮ ಫಸಲು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.

ನಮ್ಮ ತಾಲೂಕಿನಲ್ಲಿಯೇ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದರೂ ದೀಪದ ಬುಡ ಕತ್ತಲು ಎನ್ನುವಂತೆ ಆಗಿದೆ. ವಿದ್ಯುತ್ ಉತ್ಪಾದನೆ ಮಾಡಿ ಅತಿ ಕಡಿಮೆ ದರದಲ್ಲಿ ಸರಬರಾಜು ಮಾಡುತ್ತಿದ್ದೇವೆ. ಆದರೆ ನಮಗೆ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ ಎನ್ನುವುದು ದುರದೃಷ್ಟಕರ ಸಂಗತಿ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿ, ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಇಂಧನ ಸಚಿವರು ಸೂಕ್ತವಾಗಿ ಸ್ಪಂದಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಇದನ್ನೂ ಓದಿ : ಹಿಜಾಬ್ ವಿವಾದ: ಕೈ ಮುಸ್ಲಿಂ ಶಾಸಕರೊಂದಿಗೆ ಸಚಿವ ನಾಗೇಶ್ ಊಟ, ಚರ್ಚೆ

Advertisement

Udayavani is now on Telegram. Click here to join our channel and stay updated with the latest news.

Next