Advertisement
ಮಲೆನಾಡು ಸಿರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು ಎರಡು ಮೂರು ಬಾರಿ ನಾಟಿ ಮಾಡಿದ್ದು ತೇಲಿಹೋಗಿದೆ. ಈ ಹಂತದಲ್ಲಿ ರೈತರ ಜತೆ ಇರಬೇಕಾದ ಶಾಸಕರು ಟೆಂಪಲ್ ರನ್ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
Related Articles
Advertisement
ತಾಲೂಕು ಕುಡುಕರ ಸಾಮ್ರಾಜ್ಯವಾಗಿದೆ. ಬೆಂಗಳೂರಿನಲ್ಲಿ ತಮ್ಮದೇ ಐದಾರು ಬಾರ್ ಹೊಂದಿರುವ, ತಾಲೂಕಿನ ಹಳ್ಳಿಗಳಲ್ಲೂ ಎಂಎಸ್‌ಐಎಲ್ ಮದ್ಯದಂಗಡಿ ತೆರೆಯಲು ಅವಕಾಶ ಕಲ್ಪಿಸಿರುವ ಶಾಸಕರು ವ್ಯಸನಮುಕ್ತ ಸಮಾಜ ನಿರ್ಮಾಣದ ಜಾಥಾದಲ್ಲಿ ಪಾಲ್ಗೊಂಡಿದ್ದು ಹಾಸ್ಯಾಸ್ಪದ ಸಂಗತಿ. ನಗರವ್ಯಾಪ್ತಿಯಲ್ಲಿ ಒತ್ತುವರಿ ತೆರವು ಹೆಸರಿನಲ್ಲಿ ಶಾಸಕ ಹಾಲಪ್ಪ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗಪ್ಪ ಮುಸ್ಲೀಂ ಸಮುದಾಯವನ್ನು ಟಾರ್ಗೆಟ್ ಮಾಡಿ ಹಣ ವಸೂಲಿಗೆ ಇಳಿದಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಮ್ಮದೇ ಕಾರ್ಯಕರ್ತರನ್ನು ರಕ್ಷಣೆ ಮಾಡಲು ವಿಫಲವಾಗಿದೆ. ಶಿವಮೊಗ್ಗದಲ್ಲಿ ನಡೆದ ಹಿಂದೂ ಹರ್ಷ ಹತ್ಯೆ, ಪುತ್ತೂರಿನಲ್ಲಿ ನಡೆದ ಪ್ರವೀಣ್ ನೆಟ್ಯಾರ್ ಹತ್ಯೆಯ ಹೊಣೆ ಹೊತ್ತು ಗೃಹ ಸಚಿವರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಮುಖ್ಯಮಂತ್ರಿಗಳು ಮೃತ ಕುಟುಂಬಕ್ಕೆ ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡುತ್ತಿರುವುದು ಖಂಡನೀಯ. ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಕುಟುಂಬಕ್ಕೆ ಸ್ವಂತ ಮನೆ ಕಟ್ಟಿಸಿಕೊಡುವ ಜೊತೆಗೆ ಅವರ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡಿ ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಐ.ಎನ್.ಸುರೇಶಬಾಬು, ಗಣಪತಿ ಮಂಡಗಳಲೆ, ಮಹಾಬಲ ಕೌತಿ, ಯಶವಂತ ಪಣಿ, ತಾರಾಮೂರ್ತಿ, ದಿನೇಶ್ ಡಿ., ಅನ್ವರ್ ಭಾಷಾ, ಶ್ರೀನಾಥ್, ನಾರಾಯಣಪ್ಪ, ಸಂತೋಷ್ ಸದ್ಗುರು, ರವಿಕುಮಾರ್, ಶ್ರೀಧರ್ ಪಾಟೀಲ್, ಆನಂದ್ ಭೀಮನೇರಿ, ಕೃಷ್ಣಪ್ಪ ಹಾಜರಿದ್ದರು.