Advertisement
ಮಹೋತ್ಸವದಲ್ಲಿ ದೂರದಿಂದ ಆಗಮಿಸಿ ಪಾಲ್ಗೊಳ್ಳಲಿರುವ ಭಕ್ತರಿಗೆ ಊಟೋಪಚಾರದಲ್ಲಿ ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು ಎಂದು ಜೈನರ ಗುತ್ತಿ ಪಂಚಕಲ್ಯಾಣ ಸಮಿತಿ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್ ಹೇಳಿದರು. ಅವರು ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.
ವೀರ ಸಾಗರ ಮುನಿ ಮಹಾರಾಜರು ಮಾತನಾಡಿ, ಮಹೋತ್ಸವಕ್ಕೆ ವಿವಿಧೆಡೆಯಿಂದ ವಿಹಾರ ಮಾಡುತ್ತಿರುವ ಜೈನ ಮುನಿಗಳ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಸುಗಮ ವಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.