Advertisement

‘ಯಡಿಯೂರಪ್ಪ ಮತ್ತೆ ಅಧಿಕಾರಕ್ಕೆ’

12:22 PM Sep 22, 2018 | |

ಹಳೆಯಂಗಡಿ: ಮುಂದಿನ ಕೆಲವೇ ದಿನಗಳಲ್ಲಿ ರಾಜ್ಯ ಸರಕಾರ ವಿಶ್ವಾಸ ಕಳೆದುಕೊಂಡು, ಯಡಿಯೂರಪ್ಪ ಅಧಿಕಾರಕ್ಕೆ ಮರಳಲಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಹಳೆಯಂಗಡಿ ಜಾರಂದಾಯ ದೈವಸ್ಥಾನದ ಶ್ರೀನಿವಾಸ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಿನ್ನಿಗೋಳಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಕೇಂದ್ರ ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಹೇಳಿ, ಅದನ್ನು ಮತಗಳಾಗಿ ಪರಿವರ್ತಿಸಲು ಕಾರ್ಯಕರ್ತರು ಶ್ರಮ ಪಡಬೇಕು. ಗ್ರಾ.ಪಂ., ತಾ.ಪಂ., ಜಿ.ಪಂ. ಶಾಸಕ, ಸಂಸದರು ಬಿಜೆಪಿಯವರೇ ಆಗಿರುವುದರಿಂದ ಮೂಲ್ಕಿ- ಮೂಡಬಿದಿರೆ ಕ್ಷೇತ್ರವನ್ನು ಕಾಂಗ್ರೆಸ್‌ ಮುಕ್ತವನ್ನಾಗಿ ಮಾಡಲು ಕಾರ್ಯಕರ್ತರು ಇನ್ನು ಅತ್ಯಲ್ಪ ಶ್ರಮ ಪಡಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಕಾರ್ಯಕರ್ತರೊಂದಿಗೆ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು ಸಂವಾದ ನಡೆಸಿದರು.

ಬಿಜೆಪಿಯ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ, ರಾಜ್ಯದಲ್ಲಿ ದಿನಗೂಲಿ ಸರಕಾರ ಆಡಳಿತ ನಡೆಸುತ್ತಿದೆ. ಸಂಘಟನೆಯಿಂದ ಬಲವಾಗಿರುವ ಬಿಜೆಪಿಯಲ್ಲಿ ಕಾರ್ಯಕರ್ತರು ಮೊದಲು ಅನಂತರ ಜನಪ್ರತಿನಿಧಿಗಳು, ನಾಯಕರು ಎಂಬ ನಿಷ್ಠೆಯಿಂದ ಇಂದು ಬಲಿಷ್ಠವಾಗಿ ದೇಶದಲ್ಲಿ ಅಧಿಕಾರ ನಡೆಸುತ್ತಿದೆ ಇದು ಇನ್ನೂ ಮುಂದುವರಿಯಬೇಕು ಎಂದರು.

ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್‌ ಕುಮಾರ್‌ ಬೊಳ್ಳೂರು, ತಾಲೂಕು ಪಂಚಾಯತ್‌ ಸದಸ್ಯರಾದ ಜೀವನ್‌ಪ್ರಕಾಶ್‌ ಕಾಮೆರೊಟ್ಟು, ಶರತ್‌ ಕುಬೆವೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್‌ ಎಂ., ಸದಸ್ಯ ಕೆ.ಭುವನಾಭಿರಾಮ ಉಡುಪ, ಕ್ಷೇತ್ರದ ಕಾರ್ಯದರ್ಶಿಗಳಾದ ಸುಕೇಶ್‌ ಶೆಟ್ಟಿ ಶಿರ್ತಾಡಿ, ಜಯಾನಂದ ಮೂಲ್ಕಿ, ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಉಪಸ್ಥಿತರಿದ್ದರು.

ಕ್ಷೇತ್ರದ ಅಧ್ಯಕ್ಷ ಈಶ್ವರ ಕಟೀಲು ಪ್ರಸ್ತಾವನೆಗೈದರು. ಹಳೆಯಂಗಡಿ ಗ್ರಾಮ ಸಮಿತಿಯ ಅಧ್ಯಕ್ಷ ನರೇಂದ್ರ ಪ್ರಭು ಸ್ವಾಗತಿಸಿ, ನಿರೂಪಿಸಿದರು.

Advertisement

ಯೋಜನೆಗಳು ಜನರಿಗೆ ತಲುಪಲಿ
ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಕ್ಷೇತ್ರದಲ್ಲಿನ ನಿರಂತರ ಸಂಚಾ ರಕ್ಕಾಗಿ ಮೂಡಬಿದಿರೆಯಲ್ಲಿ ಸೇವಕ ಎಂಬ ಕಚೇರಿಯನ್ನು ತೆರೆದಿದ್ದೇನೆ. ಕೆಲವೊಂದು ಯೋಜನೆಯ ಫಲಾನುಭವಿಗಳನ್ನು ಗುರುತಿಸುವಾಗ ಮೊದಲು ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳನ್ನು ಪ್ರತೀ ಶಕ್ತಿ ಕೇಂದ್ರದ ನಾಯಕರು ಗುರುತಿಸಬೇಕು. ರಾಜ್ಯದಲ್ಲಿ ಸ್ಥಿರ ಸರಕಾರ ಇಲ್ಲದೇ ಇರುವುದರಿಂದ ಸರಕಾರದ ಯೋಜನೆಗಳನ್ನು ಸೂಕ್ತವಾಗಿ ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿರುವವರೇ ದಂಗೆ ಏಳಲು ಜನರಿಗೆ ಪ್ರಚೋದನೆ ನೀಡುತ್ತಿರುವಾಗ ಅಧಿಕಾರ ನಡೆಸಲು ಎಷ್ಟು ಯೋಗ್ಯರು ಎಂದು ನಾಗರಿಕರು ಪ್ರಶ್ನಿಸುವಂತಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next