Advertisement
ಆ್ಯತ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದ ಕಾರ್ಯಕಾರಿ ಸದಸ್ಯ ಚಂದ್ರಶೇಖರ ರೈ ಮಾತನಾಡಿ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಬಹುತೇಕ ಸಾಧಕರು ಗ್ರಾಮಾಂತರ ಪ್ರದೇಶವರು. ಉತ್ತಮ ಮಾರ್ಗದರ್ಶನ, ಪರಿಶ್ರಮ, ಪ್ರತಿಭೆಗೆ ತಕ್ಕ ಅವಕಾಶಗಳನ್ನು ಸೃಷ್ಟಿಸಿದರೆ ಸುಳ್ಯದಿಂದಲೂ ಅನೇಕ ಅಂತಾರಾಷ್ಟ್ರೀಯ ಕ್ರೀಡಾಪಟುಗಳನ್ನು ರೂಪಿಸಲು ಸಾಧ್ಯವಿದೆ ಎಂದರು.
Related Articles
Advertisement
ಉದ್ಘಾಟನೆ:ಕರ್ನಾಟಕ ಆ್ಯತ್ಲೆಟಿಕ್ಸ್ ಅಸೋಸಿ ಯೇಶನ್, ದಕ್ಷಿಣ ಕನ್ನಡ ಆ್ಯತ್ಲೆಟಿಕ್ಸ್ ಅಸೋಸಿಯೇಶನ್ ಮತ್ತು ಕೆ.ವಿ.ಜಿ ಸಮೂಹ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯ ತಾಲೂಕು ಆ್ಯತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ರಾಜ್ಯಮಟ್ಟದ ಹಾಫ್ ಮ್ಯಾರಥಾನ್ ಸುಳ್ಯದ ಕೆ.ವಿ.ಜಿ ಕ್ರೀಡಾಂಗಣ ದಲ್ಲಿ ನಡೆಯಿತು. ಬೆಳಗ್ಗೆ ಕರ್ನಾಟಕ ರಾಜ್ಯ ಆ್ಯತ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಎನ್. ಮುತ್ತಪ್ಪ ರೈ ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ|ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ನಿರ್ದೇಶಕ ಅಕ್ಷಯ್ ಕೆ.ಸಿ., ಭಾರತೀಯ ಕ್ರೀಡಾ ಪ್ರಾಧಿಕಾರದ ಮುಖ್ಯ ಆ್ಯತ್ಲೆಟಿಕ್ಸ್ ತರಬೇತುದಾರ ಕುರಿಯನ್ ಮ್ಯಾಥ್ಯೂ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅರಂತೋಡು ಪಾಪ್ಯುಲರ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ತಾಲೂಕು ಆ್ಯತ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಮಾಯಿಲಪ್ಪ ಗೌಡ ಕೊಂಬೆಟ್ಟು, ಅಂತಾರಾಷ್ಟ್ರೀಯ ಕ್ರೀಡಾಪಟು ತನ್ವಿ ಜಗದೀಶ್, ಕರ್ನಾಟಕ ಆ್ಯತ್ಲೆಟಿಕ್ಸ್ ಅಸೋಸಿಯೇಶನ್‌ನ ಕಾರ್ಯದರ್ಶಿ ತಾರನಾಥ್ ಶೆಟ್ಟಿ, ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಜಗದೀಶ್ ಉಪಸ್ಥಿತರಿದ್ದರು. ಮೈದಾನ, ವ್ಯಾಯಾಮ ಕೇಂದ್ರ ಸ್ಥಾಪಿಸಿ:
ಭಾರತೀಯ ಕ್ರೀಡಾ ಪ್ರಾಧಿಕಾರದ ಮುಖ್ಯ ಆ್ಯತ್ಲೆಟಿಕ್ಸ್ ತರಬೇತುದಾರ ಕುರಿಯನ್ ಮ್ಯಾಥ್ಯೂ ಮಾತನಾಡಿ, ಆರೋಗ್ಯ ವೃದ್ಧಿಗೆ ಬೇಕಿರುವುದು ಆಸ್ಪತ್ರೆಗಳು ಅಲ್ಲ. ಬದಲಿಗೆ ಮೈದಾನ, ದೈಹಿಕ ಕ್ಷಮತೆ ಕಾಪಾಡಲು ಪೂರಕವಾಗಿ ವ್ಯಾಯಾಮ ಕೇಂದ್ರಗಳು. ಅವುಗಳ ಸ್ಥಾಪನೆಗೆ ಹೆಚ್ಚು ಒತ್ತು ನೀಡಬೇಕು. ಕೆವಿಜಿ ಸಂಸ್ಥೆ ವತಿಯಿಂದ ಎನ್‌ಎಂಸಿ ಕ್ರೀಡಾ ಮೈದಾನದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಸ್ಥಾಪಿಸಬೇಕು. ಸರಕಾರದ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ಜನಪ್ರತಿನಿಧಿಗಳು ಪ್ರಯತ್ನ ಮಾಡಬೇಕು. ಈ ಮೂಲಕ ಸುಳ್ಯದ ಪ್ರತಿಭೆಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಲು ಅವಕಾಶ ದೊರೆಯಬೇಕು ಎಂದರು.