ನಿರ್ದೇಶಕ ಲೋಕೇಂದ್ರ ಸೂರ್ಯ ನಟಿಸಿ, ನಿರ್ದೇಶಿಸುತ್ತಿರುವ ದ್ವಿತೀಯ ಚಿತ್ರ ಹಾಫ್ ಮೊದಲ ಹಂತದ ಶೂಟಿಂಗ್ ಮುಕ್ತಾಯಗೊಳಿಸಿದೆ. ಈ ಹಂತದಲ್ಲಿ ಥ್ರಿಲ್ಲರ್ ಮಂಜು ಅವರ ಸಾಹಸ ಸಂಯೋಜನೆಯಲ್ಲಿ ಒಂದು ಫೈಟ್ ಕೂಡಾ ಚಿತ್ರೀಕರಣಗೊಂಡಿದೆ. ಬೆಂ
ಗಳೂರು ಮತ್ತು ಮೈಸೂರಿನಲ್ಲಿ ನಡೆದ ಹದಿನೈದು ದಿನಗಳ ಕಾಲದ ಈ ಶೆಡ್ಯೂಲ್ ನಲ್ಲಿ ಚಿತ್ರದ ಪ್ರಮುಖ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ. ಈ ಸಂದರ್ಭದಲ್ಲಿ ಸಹ ಕಲಾವಿದರು ಮತ್ತು ಸಾಹಸ ಕಲಾವಿದರು ಸೇರಿ ನೂರೈವತ್ತಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ವರ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ರೆಡ್ ಅಂಡ್ ವೈಟ್ ಮ್ಯಾನ್ ಎಂದು ದಾಖಲೆ ನಿರ್ಮಿಸಿರುವ ರೆಡ್ ಅಂಡ್ ವೈಟ್ ಸವೆನ್ ರಾಜ್ ಮತ್ತು ರಾಜು ಕಲ್ಕುಣಿ ಖಳನಟರಾಗಿ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಇದನ್ನೂ ಓದಿ : ಜ.1ಕ್ಕೆ ರಾಜತಂತ್ರ ತೆರೆಗೆ
ಆರ್.ಡಿ. ಎಂರ್ಟ ಪ್ರೈಸಸ್, ರಾಜು ಕಲ್ಕುಣಿ ಅವರ ಬ್ಯಾನರ್ ಅಡಿಯಲ್ಲಿ ಡಾ. ಪವಿತ್ರ ಆರ್. ಪ್ರಭಾಕರ್ ರೆಡ್ಡಿ ನಿರ್ಮಿಸುತ್ತಿರುವ ಹಾಫ್ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕನಟನಾಗಿಯೂ ಅಭಿನಯಿಸುತ್ತಿದ್ದಾರೆ. ಮಲ್ಲಿಕಾರ್ಜುನ್ ಬಿ.ಆರ್. ಛಾಯಾಗ್ರಹಣ, ಯುಡಿವಿ ವೆಂಕಿ ಸಂಕಲನ, ರಾಕಿ ಸೋನು ಸಂಗೀತ, ಹಿನ್ನೆಲೆ ಸಂಗೀತ, ಡಾ. ಥ್ರಿಲ್ಲರ್ ಮಂಜು ಸಾಹಸ, ಋತು ಚೈತ್ರ ಅವರ ವಸ್ತ್ರಾಲಂಕಾರ ಹಾಫ್ ಚಿತ್ರಕ್ಕಿದೆ. ಆಸಿಯಾ, ಅಥಿರಾ, ರಾಜು ಕಲ್ಕುಣಿ, ಡಾ. ಪವಿತ್ರಾ ಆರ್. ಪ್ರಭಾಕರ್ ರೆಡ್ಡಿ, ರಕ್ಷಾ, ರೆಡ್ ಅಂಡ್ ವೈಟ್ ಸವೆನ್ ರಾಜ್, ಸಿವಿಜಿ ಚಂದ್ರು, ರೋಹಿಣಿ ಕೆ. ರಾಜ್, ಮೋಹನ್ ನೆನಪಿರಲಿ ಮುಂತಾದವರ ತಾರಾಗಣವಿದೆ.