Advertisement
ಬಿಜೆಪಿ ಸರ್ಕಾರ ರಚನೆಯಾದ ಬಳಿಕ ತಹಶೀಲ್ದಾರ್ ಕಚೇರಿಗೂ ಭೇಟಿ ನೀಡಿ ತಾಲೂಕಾಡಳಿತದ ಅಧಿಕಾರಿಗಳೊಂದಿಗೆ ಕ್ಷೇತ್ರದ ಅಭಿವೃದ್ಧಿ, ಯೋಜನೆಗಳ ಪ್ರಗತಿ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು.
Related Articles
Advertisement
ಇನ್ನೂ ಫಸಲ್ಬಿಮಾ ಯೋಜನೆಯಡಿ ಎಷ್ಟು ಜನ ರೈತರಿಗೆ ವಿಮೆ ಮಾಡಲಾಗಿದೆ. ಪ್ರಗತಿ ಯಾವ ಹಂತದಲ್ಲಿದೆ ಎಂದು ಕೇಳಿದ ಹೆಗಡೆ, ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು ಸರ್ಕಾರದ ಪ್ರತಿಯೊಂದು ಯೋಜನೆ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಪಟ್ಟಣದಿಂದ ಊರ ಹೊರಗೆ ಹೋಗುವ ಕೊಳಚೆ ನೀರನ್ನು ಶುದ್ಧೀಕರಣಗೊಳಿಸಿ ರೈತರ ಹೊಲಗಳಿಗೆ ನೀಡುವ ಬಗ್ಗೆ ಯೋಜನೆಯ ಪ್ರಸ್ತಾಪವನ್ನು ಬಿಜೆಪಿ ಚುನಾಯಿತ ಸದಸ್ಯರೊಂದಿಗೆ ತಾವು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ ಅವರು ಹಳಿಯಾಳಕ್ಕೆ ಕೊಳಚೆ ನೀರು ಶುದ್ಧೀಕರಣ ಘಟಕದ ಅವಶ್ಯಕತೆ ಇದ್ದು ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು. ಇನ್ನು ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಾನೂನು ಬಾಹಿರವಾಗಿ ಅಕ್ರಮವಾಗಿ ಚಿಕನ್ ಅಂಗಡಿಗಳು ತಲೆ ಎತ್ತಿದ್ದು ಇದರಿಂದ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಸಮಸ್ಯೆಯಾಗುತ್ತಿದ್ದು, ತಕ್ಷಣ ಒಂದು ಬದಿ ಅವುಗಳಿಗೆ ಮಾರುಕಟ್ಟೆ ನಿರ್ಮಿಸಿಕೊಡಬೇಕೆಂದು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ ಅವರಿಗೆ ಹೇಳಿದರು.
ತಾಪಂ ಇಒ ಡಾ| ಮಹೇಶ ಕುರಿಯವರ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ ಮುತ್ನಾಳ, ಅಜೋಬಾ ಕರಂಜೆಕರ, ಪುರಸಭೆ ಸದಸ್ಯರಾದ ಸಂತೋಷ ಘಟಕಾಂಬಳೆ, ಉದಯ ಹೂಲಿ, ಚಂದ್ರಕಾಂತ ಕಮ್ಮಾರ, ರೂಪಾ ಗಿರಿ, ಸಂಗೀತಾ ಜಾಧವ, ರಾಜೇಶ್ವರಿ ಹಿರೇಮಠ, ಮುಖಂಡರಾದ ಉಲ್ಲಾಸ ಇತರರಿದ್ದರು.