Advertisement

Haliyala: ಶಾಲೆಯ ಗೋಡೆ ಕುಸಿತ: ಆತಂಕದಲ್ಲಿ ವಿದ್ಯಾರ್ಥಿಗಳು

03:07 PM Jul 27, 2023 | Team Udayavani |

ಹಳಿಯಾಳ : ತಾಲೂಕಿನ ಚಿಬ್ಬಲಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಲೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಎದುರಾಗಿದೆ.

Advertisement

ಗೋಡೆ ಕುಸಿದಿರುವುದರ ಬಗ್ಗೆ ಚಿಬ್ಬಲಗೇರಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಭೀಮುಶಿ ಗುಡದಾರ್, ಕಾರ್ಯದರ್ಶಿ ಶೋಭಾ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಾವಿತ್ರಿ ಕಾಂಬಳೆ ಜು.27ರ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌

ಹಳಿಯಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next