ಹಳಿಯಾಳ: ಲಾಕ್‌ಡೌನ್ ಆದೇಶ ಜಾರಿಯಾದ ದಿನದಿಂದ ಬೆಂಗಳೂರಿನ ನಿವಾಸದಲ್ಲಿದ್ದ ಶಾಸಕ ಆರ್.ವಿ. ದೇಶಪಾಂಡೆ ಅವರು ಇಂದು ಪಟ್ಟಣಕ್ಕೆ ಆಗಮಿಸಿ ತಾಲೂಕಾಡಳಿತದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಬಳಿಕ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ಯಾವುದೇ ಭೇದ ಭಾವ ವಿಲ್ಲದೆ ಜವಾಬ್ದಾರಿ ಯುತವಾಗಿ ಕೆಲಸ ಮಾಡಬೇಕಿದೆ. ಜನರ ಸಹಕಾರ ಮುಖ್ಯವಾಗಿದೆ. ಜನರು ಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರ ಮನಸ್ಸಿನಿಂದದೇಣಿಗೆ ನೀಡಬೇಕು ಎಂದು ಕರೆ ನೀಡಿದರು. ಕೊರೊನಾ ವಿರುದ್ಧ ಕೆಲಸ ಮಾಡುತ್ತಿರುವ ಎಲ್ಲ ವಾರಿಯರ್ಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ 5 ಸರ್ಕಾರಿ ಕಟ್ಟಡಗಳನ್ನು ಗುರುತಿಸಿ 307 ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಯಾರಿಗೂ ಔಷಧೋಪಚಾರ ತೊಂದರೆ ಆಗದಂತೆ ಸಂಬಂಧಪಟ್ಟವರು ಕೆಲಸ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು. ಬೇಸಿಗೆ ಕಾಲವಾದ್ದರಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ದನಕರುಗಳಿಗೆ ಮೇವಿನ ತೊಂದರೆ ಆಗದಂತೆ, ರೈತರಿಗೆ ಕೃಷಿ ಕಾರ್ಯದಲ್ಲಿ ಯಂತ್ರೋಪಕರಣಗಳು, ಬಿತ್ತನೆ ಬೀಜಗಳು, ರಸಗೊಬ್ಬರಗಳ ಕೊರತೆ ಆಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಲಾಗಿದೆ ಎಂದು ತಿಳಿಸಿದರು.
ವಿಆರ್‌ಡಿಎಂ ಟ್ರಸ್ಟ್ ನಿಂದ ವೈದ್ಯರಿಗೆ ಬಿಸ್ಕಿಟ್, ಹಣ್ಣು, ಮಾಸ್ಕ್, ಜ್ಯೂಸ್ ಇರುವ ಕಿಟ್‌ಗಳನ್ನು ವಿತರಿಸಿದರು. ಅರಣ್ಯ ಇಲಾಖೆಗೆ 300 ಮಾಸ್ಕ್ ಹಸ್ತಾಂತರಿಸಿದರು. ವಿಪ ಸದಸ್ಯ ಎಸ್.ಎಲ್. ಘೋಕ್ಲೃಕರ, ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ ಮೊದಲಾದವರು ಇದ್ದರು.
ಆರ್ವಿಡಿ ತಪಾಸಣೆ
ಬೆಂಗಳೂರಿನಿಂದ ನೇರವಾಗಿ ಪತ್ನಿ ಸಮೇತ ಹಳಿಯಾಳ ತಾಲೂಕಾ ಆಸ್ಪತ್ರೆಗೆ ಆಗಮಿಸಿದ ಆರ್.ವಿ. ದೇಶಪಾಂಡೆಯವರು ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡರು. ಅವರ ಗನ್ ಮ್ಯಾನ್ ಹಾಗೂ ಚಾಲಕನನ್ನೂ ತಪಾಸಣೆಗೆ ಒಳಪಡಿಸಲಾಯಿತು. ಬಳಿಕ ಮಿನಿ ವಿಧಾನಸೌಧದಲ್ಲಿ ತಾಲೂಕಾಡಳಿತದ
ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಕೋವಿಡ್-19ರ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಯಾವ ಬಡವರಿಗೂ ಸಮಸ್ಯೆಯಾಗದಂತೆ ಕೆಲಸ ಮಾಡುವಂತೆ ಸೂಚಿಸಿದರು.