Advertisement

ಸಾಹಿತ್ಯ ಸಮ್ಮೇಳನ ಉಚಿತ ಬಸ್‌ ಸೇವೆಗೆ ಚಾಲನೆ

01:25 PM Feb 07, 2020 | Naveen |

ಭಾಲ್ಕಿ: ನೃಪತುಂಗನ ನಾಡು ಕಲಬುರಗಿಯಲ್ಲಿ ನಡೆಯುತ್ತಿರುವ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಿನ ಹಿರಿಯ ಸಾಹಿತಿಗಳು, ಶಿಕ್ಷಕರು, ಸಾಹಿತ್ಯಾಸಕ್ತರು ತೆರಳಿದರು. ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಒದಗಿಸಿದ್ದ ಉಚಿತ ಬಸ್‌ ಸೇವೆಗೆ ಶಾಸಕ ಈಶ್ವರ ಖಂಡ್ರೆ ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, 32 ವರ್ಷಗಳ ಬಳಿಕ ತೊಗರಿ ನಾಡು, ನೆರೆಯ ಜಿಲ್ಲೆ ಕಲಬುರಗಿಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ಸಂತಸದ ಸಂಗತಿ. ಈ ಮೂರು ದಿನದ ಸಮ್ಮೇಳನದಲ್ಲಿ ಗಡಿ ಭಾಗದ ಸಮಸ್ಯೆ ಹಾಗೂ ಕನ್ನಡ ಭಾಷೆ, ನೆಲ, ಜಲ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಹಾಗಾಗಿ ತಾಲೂಕಿನ ಸಾಹಿತ್ಯಾಸಕ್ತರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮ ಭಾಗದಲ್ಲಿ ನಡೆಯುತ್ತಿರುವ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಸೂಫಿ ಸಂತರ ನಾಡು ಕಲಬುರಗಿಯಲ್ಲಿ ಐತಿಹಾಸಿಕವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಖುಷಿಯ ವಿಚಾರ. ಸಾಹಿತ್ಯಾಭಿಮಾನಿಗಳು ಈ ಭಾಗದಿಂದ ಹೆಚ್ಚು ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್‌, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಸಂಘಟನಾ ಕಾರ್ಯದರ್ಶಿ ಸಂಗಮೇಶ ಮದಕಟ್ಟಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜಪ್ಪ ಪಾಟೀಲ, ನಿಕಟಪೂರ್ವ ಅಧ್ಯಕ್ಷರಾದ ವೀರಶೆಟ್ಟಿ ಬಾವುಗೆ, ಸುಭಾಷ ಹುಲಸೂರೆ, ಕಸಾಪ ಖಟಕ್‌ ಚಿಂಚೋಳಿ ವಲಯ ಅಧ್ಯಕ್ಷ ರಾಜಕುಮಾರ ಬಿರಾದಾರ್‌, ನಿಟ್ಟೂರು(ಬಿ) ವಲಯ ಅಧ್ಯಕ್ಷ ಸಂಗಮೇಶ ಗುಮ್ಮೆ, ನಗರ ಘಟಕದ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ, ಗೌರವ ಕಾರ್ಯದರ್ಶಿ ಹಣಮಂತ ಕಾರಾಮುಂಗೆ, ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ಪ್ರಭು ಡಿಗ್ಗೆ, ನಗರ ಘಟಕದ ಮಹಿಳಾ ಅಧ್ಯಕ್ಷೆ ಅರ್ಚನಾ ಪವಾರ್‌, ಗೌರವ ಕಾರ್ಯದರ್ಶಿ ಜೀವನ ಬೇಂದ್ರೆ, ಬಸ್‌ ಡಿಪೋದ ವ್ಯವಸ್ಥಾಪಕ ಫಾಲಾಕ್ಷ, ಕುಪೇಂದ್ರ ಜಗಶೆಟ್ಟೆ, ಬಸವರಾಜ ಕುಶನೂರೆ, ಚಂದ್ರಕಾಂತ ತಳವಾಡೆ, ಸಿದ್ದಪ್ಪ ಬಿರಾದಾರ್‌ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next