Advertisement
2012ರಲ್ಲಿ ದೆಹಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಏಳು ವರ್ಷಗಳ ನಂತರ, ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಹಾಗೂ ಅಕ್ಷಯ್ ಕುಮಾರ್ ಸಿಂಗ್‌ರನ್ನು ಶುಕ್ರವಾರ ಬೆಳಗ್ಗೆ ನೇಣಿಗೇರಿಸಲಾಗಿತ್ತು.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡ್ಯುಜರಿಕ್, ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದರ ಕುರಿತು ಪ್ರತಿಕ್ರಿಯಿಸಿದ್ದು, ಜಗತ್ತಿನಾದ್ಯಂತ ಗಲ್ಲು ಶಿಕ್ಷೆಯ ಮೇಲೆ ನಿಷೇಧ ಹೇರಬೇಕು ಎಂದು ವಿಶ್ವಸಂಸ್ಥೆ ಎಲ್ಲ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ ಎಂದರು. ಕನಿಷ್ಠ ನಿಷೇಧ ಹೇರಬೇಕಿದೆ
ಮರಣದಂಡನೆಯ ಶಿಕ್ಷೆಯನ್ನು ನಿಲ್ಲಿಸುವಂತೆ ಎಲ್ಲಾ ದೇಶಗಳಿಗೆ ಕರೆ ನೀಡುತ್ತೇವೆ ಅಥವಾ ಇದಕ್ಕೆ ಕನಿಷ್ಠ ನಿಷೇಧ ಹೇರಬೇಕಿದೆ ಎಂದು ಸ್ಟೀಫನ್ ಡ್ಯುಜರಿಕ್ ತಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.