Advertisement

ಮಾರ್ಚ್‌ 2 ರಿಂದ ಅದ್ಧೂರಿಯಾಗಿ ಹಂಪಿ ಉತ್ಸವ 

12:40 AM Feb 07, 2019 | Team Udayavani |

 ಹೊಸಪೇಟೆ: ಬರಗಾಲದ ನೆಪವೊಡ್ಡಿ ಹಂಪಿ ಉತ್ಸ ವವನ್ನು ಮುಂದೂಡುತ್ತ ಬರುತ್ತಿದ್ದ ಮೈತ್ರಿ ಸರ್ಕಾರ, ಕೊನೆಗೂ ಮಾ.2 ಮತ್ತು 3ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದೆ. ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆ.7ರಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಹಂಪಿ ಉತ್ಸವ ಆಚರಣೆಗೆ ದಿನಾಂಕ ಅಧಿಕೃತವಾಗಿ ಘೋಷಣೆ ಯಾಗಲಿದೆ. ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆ ಯಲ್ಲಿ ಭಾಗವಹಿಸುವಂತೆ ಜಿಲ್ಲಾಡಳಿತ ಬುಧವಾರ ಸುತ್ತೋಲೆ ಹೊರಡಿಸಿದೆ.

Advertisement

ಈ ಮಧ್ಯೆ, ಉತ್ಸವಕ್ಕೆ ಜಿಲ್ಲಾಡಳಿತ 8 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ,ಸರ್ಕಾರ ಪ್ರವಾಸೋದ್ಯಮ ಇಲಾಖೆ ಯಿಂದ 1.50 ಕೋಟಿ ರೂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 60 ಲಕ್ಷ ರೂ. ಸೇರಿ ಒಟ್ಟು 2.10 ಕೋಟಿ ರೂ. ಅನುದಾನ ಮಾತ್ರ ಬಿಡುಗಡೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next