Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಹಂಪಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಈ ಮೊದಲು 2023ರ ಜನವರಿ ತಿಂಗಳ 7 ಮತ್ತು 8ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು.
Related Articles
Advertisement
ಅನುದಾನ: ಈಗಾಗಲೇ 2021-22ನೇ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕೃತಿ ಇಲಾಖೆಯಿಂದ 4.10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. 6 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ. ಅಗತ್ಯ ಅನುದಾನವನ್ನು ನೀಡುವಂತೆ ಈಗಾಗಲೇ ಸರಕಾರದ ವಿವಿಧ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‌ಆರ್ ನಿಧಿಯನ್ನು ನೀಡುವಂತೆ ಕೋರಲಾಗುವುದು ಎಂದರು.
2 ಮುಖ್ಯ ವೇದಿಕೆ: ಈ ಬಾರಿ 2 ಭವ್ಯ ಮುಖ್ಯ ವೇದಿಕೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಕಲಾವಿದರುಗಳ ಲಭ್ಯತೆ ಹಾಗೂ ಕಾರ್ಯಕ್ರಮಗಳ ಸೇರ್ಪಡೆ ಮೇಲೆ ಇನ್ನೂ 2 ಉಪ ವೇದಿಕೆಗಳನ್ನು ಸೇರ್ಪಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮುಂದಿನ ವರ್ಷ ನವೆಂಬರ್‌ನಲ್ಲಿ ಹಂಪಿ ಉತ್ಸವ ಹೊಸಪೇಟೆ: ಪ್ರತಿವರ್ಷ ಹಂಪಿ ಉತ್ಸವವನ್ನು ನ. 3, 4 ಮತ್ತು 5 ರಂದು ನಡೆಸಲು ಉದ್ದೇಶಿಸಿದ್ದುಈ ಬಾರಿ ಉತ್ಸವದಲ್ಲಿ ದಿನಾಂಕ ಘೋಷಣೆ ಮಾಡಲು ಚಿಂತನೆ ನಡೆದಿದೆ ಎಂದು ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಪಿ ಉತ್ಸವವನ್ನು ನಿಗದಿತ ದಿನಾಂಕದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿ ಹಾಗೂ ಇತರೆ ಅ ಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ವರ್ಷ ಹಂಪಿ ಉತ್ಸವ ನ. 3, 4, 5ರಂದು ನಡೆಸಲು ಚಿಂತನೆ ನಡೆಸಲಾಗಿದೆ. ಈ ಮೊದಲು 2023ರ ಜ.7, 8ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಜ.27, 28 ಮತ್ತು 29ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ದಿನಾಂಕ ಅಂತಿಮಗೊಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಹುಡಾ ಅಧ್ಯಕ್ಷ ಅಶೋಕ್ ಜೀರೆ, ವಿಜಯನಗರ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅನೇಕರಿದ್ದರು. ವಿಜಯನಗರದ ಭವ್ಯತೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಂಪಿ ಉತ್ಸವ ಬಹಳ ಮಹತ್ವದ್ದು. ನೂತನ ಜಿಲ್ಲೆಯಾದ ನಂತರದ ಮೊದಲ ಉತ್ಸವವನ್ನು ಅದ್ಧೂರಿಯಾಗಿ ಆಚರಿಸುವುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನವರಿ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳ ದಿನಾಂಕವನ್ನು ತೆಗೆದುಕೊಂಡು ದಿನಾಂಕವನ್ನು ಅಂತಿಮಗೊಳಿಸಲಾಗುವುದು. ಜಿಲ್ಲಾಧಿಕಾರಿ
ವೆಂಕಟೇಶ್ ಟಿ, ಪೊಲೀಷ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಸಂಸದ ದೇವೇಂದ್ರಪ್ಪ ಹಾಗೂ ನಗರಸಭೆ ಅಧ್ಯಕ್ಷ ಸುಂಕಮ್ಮ ಇನ್ನಿತರರಿದ್ದರು.