Advertisement

ಜನವರಿಯಲ್ಲಿ ಹಂಪಿ ಉತ್ಸವ ಆಚರಣೆ; ಡಿಸಿಎಂ ಲಕ್ಷ್ಮಣ ಸವದಿ

07:22 AM Oct 23, 2019 | keerthan |

ಬಳ್ಳಾರಿ: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ 3 ತಿಂಗಳ ಗುರಿ ನೀಡಿ ಅನುಷ್ಠಾನಗೊಳಿಸಲಾಗುವುದು. ಈ ಕುರಿತ ಸೂಚನೆಯನ್ನು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಹೇಳಿದರು.

Advertisement

ನಗರದ ಹೊರವಲಯದ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಸಮಾಜಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾದ ಬಾಲಕರ/ಬಾಲಕೀಯರ ವಸತಿ ನಿಲಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳು ವಿವಿಯ ಅಭಿವೃದ್ಧಿಗೆ ಹಣದ ಅವಶ್ಯಕತೆ ಇದೆ ಎಂದು ತಿಳಿಸಿದ್ದು ಅದನ್ನು ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಂಪಿ ಉತ್ಸವವನ್ನು ಜನವರಿಯಲ್ಲಿ ಆಚರಿಸಲಾಗುವುದು. ಮುಂದಿನ ವರ್ಷದಿಂದ ನವೆಂಬರ್ ತಿಂಗಳಲ್ಲಿ ಆಚರಿಸಲಾಗುವುದು ಎಂದು ಸವದಿ ತಿಳಿಸಿದರು.

ಕೃಷ್ಣೆ,ಮಲಪ್ರಭಾ, ಘಟಪ್ರಭಾ ಸೇರಿದಂತೆ ವಿವಿಧೆಡೆ ಪ್ರವಾಹ ಮತ್ತೆ ತಲೆದೂರಿದ್ದು, ಈಗಾಗಲೇ ಜಿಲ್ಲಾಡಳಿತಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ ಎಂದು ವಿವರಿಸಿದ ಡಿಸಿಎಂ ಸವದಿ ಅವರು 1200ಕೋಟಿ ರೂ.ಗಳ ಪರಿಹಾರ ಹಣ ಕೇಂದ್ರದಿಂದ ಈಗಾಗಲೇ ಮೊದಲ ಕಂತಿನ ರೂಪದಲ್ಲಿ ಬಿಡುಗಡೆಯಾಗಿದೆ. ಎರಡನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Advertisement

ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಎಲ್ಲರ ಅಭಿಪ್ರಾಯ ಪಡೆದು ನಿರ್ಣಯ ಕೈಗೊಳ್ಳಲಾಗುವುದು. ಈಗಾಗಲೇ ಒಂದು ಬಾರಿ ಸಭೆಯಾಗಿದೆ. ಇನ್ನೊಂದು ಬಾರಿ ಸಂಘಸಂಸ್ಥೆಗಳ ಮುಖಂಡರು, ಶಾಸಕರು,‌ಸಂಸದರು, ಮಾಜಿ ಶಾಸಕರು,‌ಮಾಜಿ ಸಂಸದರು, ಜನಪ್ರತಿನಿಧಿಗಳು ಸೇರಿದಂತೆ ಸರ್ವರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ, ಸಂಗಣ್ಣ ಕರಡಿ, ಶಾಸಕರಾದ ಸೋಮಶೇಖರ್ ರೆಡ್ಡಿ, ಕರುಣಾಕರ ರೆಡ್ಡಿ, ಬಿ.ನಾಗೇಂದ್ರ,

ಅಲ್ಲಂ ವೀರಭದ್ರಪ್ಪ, ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ‌ ಸಿ.ಕೆ.ಬಾಬಾ,‌ ವಿವಿ ಕುಲಪತಿ ಸಿದ್ದು ಪಿ. ಆಲಗೂರು, ಜಿಪಂ ಸದಸ್ಯರು ಸೇರಿದಂತೆ ಅನೇಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next