Advertisement

ಹಂಪಿ ಸ್ಮಾರಕ ಧ್ವಂಸ ಪ್ರಕರಣ: ಇಬ್ಬರು ಸಿಬ್ಬಂದಿಗೆ ನೋಟಿಸ್‌

12:51 AM Feb 04, 2019 | Team Udayavani |

ಹೊಸಪೇಟೆ: ಐತಿಹಾಸಿಕ ಹಂಪಿಯ ಪುರಾತನ ವಿಷ್ಣುದೇಗುಲ ಮಂಟಪ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಇಬ್ಬರು ಸಿಬ್ಬಂದಿಗೆ ನೋಟಿಸ್‌ ಜಾರಿಗೊಳಿಸಿದೆ. ಅಲ್ಲದೆ ವಿಷ್ಣು ದೇವಾಯಲದ ಬಳಿ ಇಬ್ಬರು ಕಾವಲುಗಾರರನ್ನು ನಿಯೋಜಿಸಲಾಗಿದೆ.

Advertisement

ಸ್ಮಾರಕಗಳಿಗೆ ಧಕ್ಕೆಯಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ಸುದ್ದಿಯಾದ ನಂತರ ಭಾನುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಡೆಪ್ಯೂಟಿ ಸೂಪರಿಟೆಂಡೆಂಟ್ ಕಾಳಿಮುತ್ತು, ವಿಷ್ಣು ದೇಗುಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗುವುದು. ಸೋಮವಾರ ಪುರಾತತ್ವ ಇಲಾಖೆ ಸಿಬ್ಬಂದಿಯೊಂದಿಗೆ ಸಭೆ ಕರೆಯಲಾಗಿದೆ. ಘಟನೆ ನಡೆದು ಇಷ್ಟು ದಿನಗಳಾದ್ರೂ ಯಾಕೆ ಇಲಾಖೆ ಗಮನಕ್ಕೆ ಬಂದಿಲ್ಲ. ಭದ್ರತಾ ಸಿಬ್ಬಂದಿ ಇದ್ದರೂ ಯುವಕರು ಮಂಟಪದ ಕಂಬ ಬೀಳಿಸಿದ್ದು ಹೇಗೆ? ಈ ಬಗ್ಗೆ ಗಂಭೀರವಾಗಿ ವಿಚಾರಿಸಲಾಗುವುದುಎಂದರು.

Advertisement

Udayavani is now on Telegram. Click here to join our channel and stay updated with the latest news.

Next