ಹೊಸಪೇಟೆ: ಕೊರೊನಾ ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಕಳೆದ ತಿಂಗಳು ವಿಶ್ವವಿಖ್ಯಾತ ಹಂಪಿಗೆ ಭೇಟಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ ತೆರವುಗೊಳಿಸಿ, ಪ್ರವಾಸಿಗರಿಗೆ ಮುಕ್ತ ಅವಕಾಶ ನೀಡಿದೆ. ಕಳೆದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವ್ಯಾಪ್ತಿಯ ದೇವಾಲಯ ಹಾಗೂ ಸ್ಮಾರಕಗಳ ವೀಕ್ಷಣೆಗೆ ಆ.14ರಂದು ನಿಷೇಧ ಹೇರಿದ್ದ ಜಿಲ್ಲಾಡಳಿತ ನಿರ್ಬಂಧ ತೆರವುಗೊಳಿಸಿ, ಪ್ರವಾಸಿಗರ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದೆ.
ಶನಿವಾರ ಹಾಗೂ ಭಾನುವಾರ ರಜೆ ದಿನಗಳಲ್ಲಿ ಇನ್ನುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಭೇಟಿ ನೀಡಲಿದ್ದು, ಪ್ರವಾಸೋದ್ಯಮ ಚಟುವಟಿಕೆಗಳು ಗರಿಗೆದರಲಿವೆ. ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಕಳೆದ ತಿಂಗಳು ಪ್ರತಿ ಶನಿವಾರ, ಭಾನುವಾರ ಸೋಮವಾರ ಹಾಗೂ ಅಮಾವಾಸ್ಯೆ ದಿನದಲ್ಲಿ ಕೂಡ ಪ್ರವಾಸಿಗರ ಭೇಟಿಗೆ ಜಿಲ್ಲಾಡಳಿತ ಕಡಿವಾಣ ಹಾಕಿತ್ತು. ಇದರಿಂದಾಗಿ ವಾರದಲ್ಲಿ ನಾಲ್ಕು ದಿನ ಮಾತ್ರ ಪ್ರವಾಸಿಗರು ಹಂಪಿಗೆ ಭೇಟಿ ನೀಡಬಹುದಿತ್ತು.
ಕೊರೊನಾ ಎರಡೂ ಅಲೆಗಳಿಂದ ತೀವ್ರ ಹಿನ್ನಡೆ ಅನುಭವಿಸಿದ್ದ ಹಂಪಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಾಗಿತ್ತು. ಹಂಪಿ ಪ್ರವಾಸೋದ್ಯಮದಿಂದ ಬದುಕು ಕಟ್ಟಿಕೊಂಡಿದ್ದ ಗೈಡ್‌ಗಳು, ಹೋಟೆಲ್, ರೆಸ್ಟೋರೆಂಟ್ ಸಣ್ಣ-ಪುಟ್ಟ ವ್ಯಾಪಾರ-ವಹಿವಾಟು ನಡೆಸಿಕೊಂಡು ಅನೇಕರು ತೊಂದರೆಗೆ ಒಳಗಾಗಿದ್ದರು. ಈಗ ಹಂಪಿಗೆ ಪ್ರವಾಸಿಗರ ಭೇಟಿಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರು, ಹಂಪಿಯ ಕಡೆ ಮುಖ ಮಾಡಲಿದ್ದು, ಪ್ರವಾಸೊದ್ಯಮದಲ್ಲಿ ಕೊಂಚ ಮಟ್ಟಿಗೆ ಚೇತರಿಕೆ ಕಾಣುವ ಲಕ್ಷಣಗಳು ಗೋಚರವಾಗುತ್ತಿವೆ.
ಕೊರೊನಾ ಎರಡು ಅಲೆಗಳ ಲಾಕ್‌ಡೌನ್‌ನಿಂದ ಎಲ್ಲೂಹೊರಹೋಗಲು ಸಾಧ್ಯವಾಗಿರಲ್ಲಿಲ್ಲ. ಶನಿವಾರಹಾಗೂ ಭಾನುವಾರ ರಜೆ ದಿನಗಳಲ್ಲಿ ಹಂಪಿಗೆ ಭೇಟಿ ನೀಡಿ ಸ್ಮಾರಕ ವೀಕ್ಷಣೆ ಮಾಡುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ.
ಸುರೇಶ್, ಪ್ರವಾಸಿಗ, ದಾವಣಗೆರೆ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವ್ಯಾಪ್ತಿಯಹಂಪಿ, ಕಮಲಾಪುರ ಹಾಗೂ ವೆಂಕಟಾಪುರ ವ್ಯಾಪ್ತಿ ಗೆಒಳಪಡುವ ದೇವಾಲಯ ಹಾಗೂ ಸ್ಮಾರಕಗಳ ವೀಕ್ಷಣೆಗೆ ಆ.14ರಂದುಹೇರಿದ್ದ ನಿರ್ಬಂಧ ಗುರುವಾರ ತೆರವುಗೊಳಿಸಿ, ಪ್ರವಾಸಿಗರಿಗೆ ಮುಕ್ತ ಅವಕಾಶಕಲ್ಪಿಸಿದೆ.
ಪವನ್ ಕುಮಾರ್‌ಮಾಲಿಪಾಟಿ,
ಜಿಲ್ಲಾಧಿಕಾರಿಗಳು, ಬಳ್ಳಾರಿ ಮತ್ತು
ವಿಜಯನಗರ
ಕಳೆದ ಕೊರೊನಾ ಒಂದು ಮತ್ತು ಎರಡನೇ ಅಲೆ ಹೊಡೆತಕ್ಕೆ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಆರ್ಥಿಕ ಹೊಡೆತ ಬಿದ್ದಿತ್ತು. ಇದರ ನಡುವೆಯೂ ಕೊರೊನಾ ಮೂರನೇ ಅಲೆ ಭೀತಿಹಿನ್ನೆಲೆಯಲ್ಲಿಕಳೆದ ಹಂಪಿ ಭೇಟಿಗೆ ನಿಷೇಧಹೇರಲಾಗಿತ್ತು. ಇದರಿಂದಾಗಿ ಹೊಟೇಲ್, ರೆಸ್ಟೋರೆಂಟ್, ಸಣ್ಣ-ಪುಟ್ಟ ವ್ಯಾಪಾರ ವಹಿವಾಟಿಗೆಹಿನ್ನಡೆಯಾಗಿತ್ತು. ಇದೀಗ ಹಂಪಿಗೆ ಭೇಟಿಗೆ ಅವಕಾಶ ನೀಡಿದಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಅನುಕೂಲವಾಗಲಿದೆ.
ಅಂಬರೇಶ್ ವಾಲ್ಮೀಕಿ, ಗೈಡ್, ಕಮಲಾಪುರ
*ಪಿ.ಸತ್ಯನಾರಾಯಣ