ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿನಿಂದ ಕೂಡಿದ ಮತ್ತು ಆಡಳಿತಾ ರೂಢ ಬಿಜೆಪಿ ಮತ್ತು ವಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್‌ಗಳಿಗೆ ಪ್ರತಿಷ್ಠೆ ಯಾಗಿರುವ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿದೆ.
ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಮತ ದಾನ ನಡೆಯಲಿದ್ದು, ಎರಡೂ ಕ್ಷೇತ್ರ ಗಳಲ್ಲಿ ಕಣದಲ್ಲಿರುವ 19 ಅಭ್ಯರ್ಥಿಗಳ ಭವಿಷ್ಯವನ್ನು 4.38 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ. ನ. 2ರಂದು ಮತ ಎಣಿಕೆ ನಡೆಯಲಿದೆ.
ಸಿಂದಗಿಯಲ್ಲಿ 6 ಮಂದಿ ಕಣದಲ್ಲಿದ್ದು, 2.34 ಲಕ್ಷ ಮತದಾರರಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ 13 ಮಂದಿ ಕಣದಲ್ಲಿದ್ದು, 2.04 ಲಕ್ಷ ಮತದಾರರಿದ್ದಾರೆ. ಎರಡೂ ಕ್ಷೇತ್ರಗಳ 560 ಮತಗಟ್ಟೆಗಳ ಪೈಕಿ 99 ಸೂಕ್ಷ್ಮ ಎಂದು ಗುರುತಿಸಲಾಗಿದೆ. 60 ಮಂದಿ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ:ಈ ರಾಜ್ಯದಲ್ಲಿ ಎಂಬಿಬಿಎಸ್ ಶುಲ್ಕ 4.5 ಲಕ್ಷ ರೂ.ನಿಂದ 1.5 ಲಕ್ಷಕ್ಕೆ ಇಳಿಕೆ
ಎರಡೂ ಕ್ಷೇತ್ರಗಳಲ್ಲಿ ಮತದಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ಸುರಕ್ಷಿತ ಮತ್ತು ಮುಕ್ತವಾಗಿ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಅಗತ್ಯಕ್ಕೆ ತಕ್ಕಂತೆ ಭದ್ರತ ಕ್ರಮ ಕೈಗೊಳ್ಳಲಾಗಿದೆ.
-ಮನೋಜ್ ಕುಮಾರ್ ಮೀನಾ, ರಾಜ್ಯ ಮುಖ್ಯ ಚುನಾವಣಾಧಿಕಾರಿ