Advertisement

ಮತದಾರರ ಓಲೈಕೆಗೆ “ಕೈ’ಸಮಾವೇಶ ಇಂದು

07:25 AM Aug 16, 2017 | Team Udayavani |

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವಂತೆ ಎರಡೂ ರಾಷ್ಟ್ರೀಯ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯದ ಕಡೆಗೆ
ಮುಖ ಮಾಡಿದ್ದಾರೆ. ಮೂರು ದಿನ ವಾಸ್ತವ್ಯ ಹೂಡಿದ್ದ ಅಮಿತ್‌ ಶಾ ದೆಹಲಿ ತಲುಪಿದ ಬೆನ್ನಲ್ಲೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌
ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

Advertisement

ಕಳೆದ ವಾರವಷ್ಟೇ ಹೈದರಾಬಾದ್‌ ಕರ್ನಾಟಕ ಭಾಗಕ್ಕೆ ಆಗಮಿಸಿ ತೆರಳಿದ್ದ ರಾಹುಲ್‌ ಗಾಂಧಿ ಬುಧವಾರ ಬೆಂಗಳೂರಿಗೆ
ಆಗಮಿಸುತ್ತಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಹೆಸರಿನಲ್ಲಿ ರಾಜ್ಯ ಸರ್ಕಾರ ಆರಂಭಿಸುತ್ತಿರುವ “ಇಂದಿರಾ ಕ್ಯಾಂಟೀನ್‌’ ಉದ್ಘಾಟನೆ ಮಾಡುವುದರ ಜತೆಗೆ ರಾಜಧಾನಿಯಲ್ಲಿ ಹೆಚ್ಚು ವಿಧಾನ ಸಭಾ ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಚುನಾವಣೆಯ ರಣಕಹಳೆಯನ್ನೂ ಮೊಳಗಿಸಲಿದ್ದಾರೆ.

ಬೆಳಗ್ಗೆ 9.30 ಕ್ಕೆ ಬೆಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಹುಲ್‌ ಗಾಂಧಿ, ಚಿಕ್ಕಪೇಟೆ
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನಕನ ಪಾಳ್ಯ ವಾರ್ಡ್‌ನಲ್ಲಿ ಇಂದಿರಾ ಕ್ಯಾಂಟೀನ್‌ ಗೆ ಚಾಲನೆ ನೀಡಲಿದ್ದಾರೆ. ನಂತರ
ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರದ ಕೆಳ ಮಧ್ಯಮ
ವರ್ಗದ ಜನರನ್ನು ದೃಷ್ಠಿಯಲ್ಲಿಟ್ಟುಕೊಂಡು ಆರಂಭವಾಗುತ್ತಿರುವ ಇಂದಿರಾ ಕ್ಯಾಂಟೀನ್‌ ಅದೇ ವರ್ಗದ ಮತದಾರರ ಮೇಲೂ ಕಣ್ಣಿಟ್ಟಿದ್ದು, ಅವರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್‌ ಪಕ್ಷ ಇಂದಿರಾ ಮಂತ್ರ ಜಪಿಸುತ್ತಿದೆ.

ಕಾರ್ಯಕ್ರಮ ನಡೆಯುವ ಬಸವನ ಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಪೂರ್ವ ಸಿದಟಛಿತೆಗಳ ಬಗ್ಗೆ ಕೆಪಿಸಿಸಿ
ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಪರಿಶೀಲನೆ ನಡೆಸಿ, ಸಮಾವೇಶಕ್ಕೆ ಸುಮಾರು 1 ಲಕ್ಷ ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಳೆ ಬಂದರೂ ನೆನೆಯದಂತೆ ಪೆಂಡಾಲ್‌ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಮಾವೇಶ ನಡೆಯುವ ಮೈದಾನದ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕುರಿತಂತೆಯೂ ಬೆಂಗಳೂರು ನಗರ ಪೊಲಿಸ್‌ ಆಯುಕ್ತ
ಸುನಿಲ್‌ ಕುಮಾರ್‌, ಹೆಚ್ಚುವರಿ ಪೊಲೀಸ್‌ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ, ದಕ್ಷಿಣ ವಿಭಾಗದ ಡಿಸಿಪಿ ಶರಣಪ್ಪ ಪರಿಶೀಲನೆ ನಡೆಸಿದರು. ಭದ್ರತೆಯ ಜವಾಬ್ದಾರಿಯನ್ನು ಹೆಚ್ಚುವರಿ ಪೊಲಿಸ್‌ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಅವರಿಗೆ ವಹಿಸಲಾಗಿದೆ. ಇಬ್ಬರು ಡಿಸಿಪಿಗಳು ನಾಲ್ವರು ಎಸಿಪಿಗಳು, 9 ಪೊಲೀಸ್‌ ಇನ್ಸ್‌ ಪೆಕ್ಟರ್‌, 1200 ಸಿವಿಲ್‌ ಪೊಲೀಸ್‌ ಸಿಬ್ಬಂದಿ,500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾಗೆ ನೀಡಿದ್ದ ಸರ್ಕಾರಿ ಶಿಷ್ಟಾಚಾರ ವಾಹನದಲ್ಲಿ ಖಾಸಗಿ ವ್ಯಕ್ತಿಗಳ ಪ್ರಯಾಣದ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದಟಛಿ ಕ್ರಮ ಕೈಗೊಳ್ಳ
ಲಾಗುವುದು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆ
ಸಮಾವೇಶ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. 198 ವಾರ್ಡ್‌ಗಳಲ್ಲಿ ಕ್ಯಾಂಟಿನ್‌ ತೆರೆಯಲಾಗುತ್ತಿದೆ. ಕಡಿಮೆ ದರದಲ್ಲಿ ತಿಂಡಿ, ಊಟ ನೀಡಲು ಯೋಜಿಸಲಾಗಿದೆ. ಚುನಾವಣೆ ದೃಷ್ಟಿಯಿಂದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಕಾರ್ಯಕರ್ತರ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next