ಚಿತ್ರದುರ್ಗ: ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕೆಲವೇ ತಿಂಗಳುಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ ಆಶ್ಚರ್ಯವಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅ ಧಿಕಾರಕ್ಕೆ ಬರಬೇಕು
ಎನ್ನುವುದು ರಾಜ್ಯದ ಜನರ ಭಾವನೆಯಾಗಿದೆ.
ಸಮ್ಮಿಶ್ರ ಸರ್ಕಾರ ಜನಮತ ಪಡೆಯದೆ ಇರುವುದರಿಂದ ಪತನವಾಗುವುದು ನಿಶ್ವಿತ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ನಾವೇ ಕೆಡವಿದರೆ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತೆ. ಆದ್ದರಿಂದ ನಾವು ಸರ್ಕಾರ ಬೀಳಿಸಲು ಹೋಗುವುದಿಲ್ಲ.ಅವರಾಗಿಯೇ ಅಧಿಕಾರದಿಂದ ಕೆಳಗಿಳಿಯುವ ಸ್ಥಿತಿ ಬರುತ್ತದೆ ಎಂದರು.
ಸ್ವಾತಂತ್ರ್ಯ ದಿನಾಚರಣೆ ಒಳಗಾದರೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾದರೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಲು ಅನುಕೂಲವಾಗಲಿದೆ.
– ಕೋಟಾ ಶ್ರೀನಿವಾಸ ಪೂಜಾರಿ
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ