Advertisement
ಈ ಹಿಂದೆ ಒಮ್ಮೆ ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಹೆಚ್.ವಿ.ಮಂಜುನಾಥ, ವರಿಷ್ಟರ ಸೂಚನೆಯಂತೆ ರಾಜೀನಾಮೆ ವಾಪಸ್ಸು ಪಡೆದು ಅಧ್ಯಕ್ಷರಾಗಿ ಮುಂದುವರೆದಿದ್ದರು. ಆದರೆ ಇದೀಗ ಮತ್ತೆ ರಾಜೀನಾಮೆ ಪಡೆದಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಜಿಪಂ ಅಧ್ಯಕ್ಷ ಮಂಜುನಾಥ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಪ್ರದಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
Related Articles
Advertisement
ಅವಕಾಶ ಕಲ್ಪಿಸಿದ ಪಕ್ಷದ ನಿರ್ದೇಶನಗಳಿಗೆ ಬದ್ಧರಾಗಿ ನಡೆಯುವುದು ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಸಾರ್ವಜನಿಕ ಜೀವನದ ನೀತಿ ಸಂಹಿತೆಯ ಭಾಗವೆಂದು ಭಾವಿಸುತ್ತೇನೆ. ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದ ಅವರು, ಮೂರು ಹಂತಗಳ ಪಂಚಾಯ್ತಿರಾಜ್ ವ್ಯವಸ್ಥೆ ಯಶಸ್ವಿಯಾಗಿ ಅಧಿಕಾರ ವಿಕೇಂದ್ರೀಕರಣದ ಆಶಯಗಳು ಈಡೇರಬೇಕೆಂದರೆ ಜನಪ್ರತಿನಿಧಿಗಳಿಗೆ ಇನ್ನೂ ಹೆಚ್ಚಿನ ಸ್ವಾತಂತ್ರ್ಯ, ಅನುದಾನ ಮತ್ತು ಸಮಯ ಇರಬೇಕೆಂಬ ನನ್ನ ಈ ಹಿಂದಿನ ಅನಿಸಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಬಯಸುತ್ತೇನೆ. ಹಾಗೆಯೇ ಅಧಿಕಾರ ವಿಕೇಂದ್ರೀಕರಣದ ಉದ್ದೇಶವನ್ನು ತಳಮಟ್ಟದ ಜನಪ್ರತಿನಿಧಿಗಳು ಮನಗಾಣದಿದ್ದರೂ ಅಪಾಯವಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಚರ್ಚೆ ನಡೆಯಲಿ ಎಂದು ಆಶಿಸುತ್ತೇನೆ ಎಂದರು.
ಪ್ರಕಾಶ್ ಗೆ ಅಧ್ಯಕ್ಷ ಸ್ಥಾನ
ಸದ್ಯ ಚಿಕ್ಕಬಳ್ಳಾಪುರದ ಅರ್ನಹ ಶಾಸಕ ಡಾ.ಕೆ.ಸುಧಾಕರ್ ಪರ ಗುರುತಿಸಿಕೊಂಡಿರುವ ಜಿಲ್ಲೆಯ ಮಂಚೇನಹಳ್ಳಿ ಜಿಪಂ ಸದಸ್ಯ ಪಿ.ಎನ್.ಪ್ರಕಾಶ್ ಗೆ ಅಧ್ಯಕ್ಷ ಸ್ತಾನ ನೀಡಿ ಅವರನ್ನು ಪಕ್ಷದಲ್ಲಿಯೆ ಉಳಿಸಿಕೊಳ್ಳುವ ತಂತ್ರ ನಡೆಸಿ ಹೆಚ್. ವಿ.ಮಂಜುನಾಥರಿಂದ ರಾಜೀನಾಮೆ ಪಡೆಯಲಾಗಿದೆ ಎನ್ನಲಾಗುತ್ತಿದೆ.