ಮುಂಬಯಿ: ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಮತ್ತು ಶಾಸಕ ರವಿ ರಾಣಾ ವಿರುದ್ಧ ವಿಶೇಷ ಕೋರ್ಟ್ ವಾರಂಟ್ ಹೊರಡಿಸಿದೆ.
ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡಬೇಕು ಎಂದು ಮುಂಬಯಿ ಪೊಲೀಸರು ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ರಾಣಾ ದಂಪತಿ ಜಾಮೀನು ನೀಡುವ ವೇಳೆ ವಿಧಿಸಲಾಗಿರುವ ಷರತ್ತುಗಳನ್ನು ಉಲ್ಲಂಘಿ ಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೋರ್ಟ್, ರಾಣಾ ದಂಪತಿಗೆ ನೋಟಿಸ್ ಜಾರಿ ಮಾಡಿದ್ದು, 18ರಂದು ಹಾಜರಾಗು ವಂತೆ ಸೂಚಿಸಿದೆ. ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ಯತ್ನಿಸಿದ್ದಕ್ಕಾಗಿ ರಾಣಾ ದಂಪತಿಯನ್ನು ಎ.23ರಂದು ಬಂಧಿಸಲಾಗಿತ್ತು.
ಇದೇ ವೇಳೆ ಮಹಾರಾಷ್ಟ್ರ ಸರಕಾರ ನಮ್ಮನ್ನು ನಡೆಸಿಕೊಂಡ ರೀತಿಯ ಕುರಿತು ಪ್ರಧಾನಿ ಮೋದಿ ಹಾಗೂ ಸಚಿವ ಅಮಿತ್ ಶಾಗೆ ದೂರು ನೀಡುವುದಾಗಿ ರಾಣಾ ದಂಪತಿ ಹೇಳಿದ್ದಾರೆ.