Advertisement

ಯತ್ನಾಳ ಅವರು ನಮ್ಮ ಕುಟುಂಬದ ಬಗ್ಗೆ ಪತ್ರ ಬರೆದಿದ್ದರೆ ಸಂತೋಷ: ಬಿ.ವೈ. ವಿಜಯೇಂದ್ರ

08:40 PM Feb 19, 2021 | Team Udayavani |

ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ತುಂಬ ಹಿರಿಯರು. ಅವರಿಗೆ ನನ್ನ ಮೇಲೆ ತುಂಬ ಪ್ರೀತಿಯಿದೆ. ನಮ್ಮ ಕುಟುಂಬದ ಬಗ್ಗೆ ಅವರು ಪತ್ರ ಬರೆದಿದ್ದಾರೆಂದರೆ ತುಂಬ ಸಂತೋಷ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಕ್ರವಾಗಿ ನುಡಿದರು.

Advertisement

ತಾಲೂಕಿನ ಹುಲಿಗೆಮ್ಮ ದೇವಿ ದೇವಸ್ಥಾನದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಪತ್ರ ಬರೆದ ವಿಚಾರ ದೆಹಲಿಯ ನಾಯಕರು ನೋಡಿಕೊಳ್ಳುತ್ತಾರೆ ಎಂದಷ್ಟೇ ಹೇಳಿ, ರಾಜ್ಯದಲ್ಲಿ ಮೀಸಲಾತಿಗೆ ನಡೆದ ಹೋರಾಟದ ವಿಚಾರದಲ್ಲಿ ಯಾರ ವಿರೋಧವೂ ಇಲ್ಲ. ಸಿಎಂ, ಬಿಜೆಪಿ ನಾಯಕರು ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಯಾವ ಗುಂಪುಗಾರಿಕೆಯೂ ನಡೆದಿಲ್ಲ. ಮೀಸಲಾತಿಗೆ ಹೋರಾಟ ಮಾಡುವುದು ಸಹಜ. ಹೋರಾಟ ಮಾಡುವುದು ತಪ್ಪಲ್ಲ. ಆದರೆ ಸಂವಿಧಾನದಡಿ ಯಾವ ರೀತಿ ಪರಿಹಾರ ಕೊಡಬೇಕು ಎನ್ನುವುದನ್ನ ಸಿಎಂ ನಿರ್ಧರಿಸುತ್ತಾರೆ ಎಂದರು.

ಬಸವ ಕಲ್ಯಾಣ, ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಮುಂದಿನ ಚುನಾವಣೆಗೆ ನಾನು ಏಲ್ಲಿ ಅಭ್ಯರ್ಥಿಯಾಗುವೆ ಎನ್ನವುದು ಗೊತ್ತಿಲ್ಲ. ಅದೆಲ್ಲವನ್ನು ಪಕ್ಷ ನಿರ್ಣಯ ಮಾಡಲಿದೆ. ಇನ್ನೂ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ವಿಚಾರಣದಲ್ಲಿ ಯಾರಾದರೂ ಅವಿದ್ಯಾವಂತರು ಮಾತನಾಡಿದ್ದರೆ ನಾನು ಉತ್ತರ ಕೊಡಬಹುದಿತ್ತು. ಆದರೆ ವಿದ್ಯಾವಂತರಾದ ಸಿದ್ದರಾಮಯ್ಯ, ಹೆಚ್‌ಡಿಕೆ ಅವರೇ ಈ ರೀತಿ ಮಾತನಾಡಿದರೆ ಹೇಗೆ ? ಎಂದರಲ್ಲದೇ, ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಅದು ವಿವಾಧಿತ ಎನ್ನುವುದು ನನಗೆ ಆಶ್ಚರ್ಯ ತರಿಸಿದೆ. ಇಂತಹ ವಿಷಯದಲ್ಲಿ ರಾಜಕೀಯ ಮಾಡಿ ಮತದಾರರನ್ನ ಅಡ್ಡದಾರಿಗೆ ತೆಗೆದುಕೊಂಡು ಹೋಗಿದ್ದಕ್ಕೆ ಕಾಂಗ್ರೆಸ್‌ಗೆ ಈ ಗತಿ ಬಂದಿದೆ ಎಂದು ಸಿದ್ದು, ಹೆಚ್‌ಡಿಕೆ ಹೇಳಿಕೆಗೆ ವಿಜಯೇಂದ್ರ ಅವರು ತಿರುಗೇಟು ನೀಡಿದರು.

ಇದನ್ನೂ ಓದಿ:  ಬಿಜೆಪಿಯವರು ಕೂಲಿ ಕಾರ್ಮಿಕರ ವಿರೋಧಿಗಳು: 2 ವರ್ಷದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಸಿದ್ದು

Advertisement

Udayavani is now on Telegram. Click here to join our channel and stay updated with the latest news.

Next