Advertisement
ಅದರಲ್ಲಿ ಸಹೋದರ ಸದಾಕಾಲ ತನ್ನನ್ನು ರಕ್ಷಿಸಬೇಕು ಹಾಗೂ ಸಹೋದರನೂ ಕೂಡ ಸದಾ ಶ್ರೀರಕ್ಷೆಯಿಂದಿರಬೇಕು ಎಂಬ ಆಶಯ ಅಡಗಿದೆ. ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು.
Related Articles
Advertisement
ಪ್ರಸ್ತುತ, ಈ ಹಬ್ಬವು ಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ಬಂಧದ ಸಮಾನಾರ್ಥಕವಾಗಿದೆ ಮತ್ತು ಇದು ಸಹೋದರಿ ಮತ್ತು ಸಹೋದರರ ನಡುವಿನ ಪ್ರೀತಿಯನ್ನು ಬಲಪಡಿಸುವ ಮತ್ತು ಪುನರುಚ್ಚರಿಸುವ ಉತ್ಸವವಾಗಿದೆ ಎಂದು ಹೇಳಬಹುದು. ಒಂದು ಕಡೆ, ಸಹೋದರನು ತನ್ನ ಸಹೋದರಿಯನ್ನು ನೋಡಿಕೊಳ್ಳುವುದಾಗಿ ಮತ್ತು ತನ್ನ ಜೀವನ ಪರ್ಯಂತ ಅವಳನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತಾನೆ. ಮತ್ತೊಂದೆಡೆ, ಸಹೋದರಿ ತನ್ನ ಸಹೋದರನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾಳೆ.
ತಂಗಿಯಾದವಳಿಗೆ ಅಣ್ಣ ಕೇವಲ ಸಂಬಂಧವಲ್ಲ ಅಳುವಾಗ ಕಣ್ಣೊರೆಸುವ ಕೈಯಾಗುತ್ತಾನೆ, ನೊಂದಾಗ ಮಿಡಿಯುವ ಹೃದಯವಾಗುತ್ತಾನೆ, ರಕ್ಷಣೆಗೆ ಸದಾ ಸಿದ್ದವಿರುವ ಯೋಧನಾಗಿರುತ್ತಾನೆ, ಅಂತೆಯೇ ತಂಗಿ ಅಣ್ಣನಾದವನ ಪ್ರತಿ ಭಾವನೆಗೆ ಸ್ಪಂದಿಸುವ ಗೆಳತಿಯಾಗಿರುತ್ತಾಳೆ, ಆರೋಗ್ಯ ಕೆಟ್ಟಾಗ ಸೇವೆ ಮಾಡುವಸೇವಕಿಯಾಗಿರುತ್ತಾಳೆ. ಇದು ಕೇವಲ ರಕ್ಷೆಯ ಬಂಧನವಲ್ಲ ಮಧುರ ಪ್ರೀತಿಯ ಬಂಧನ.
ಈ ಪರಿಸ್ಥಿತಿಯಲ್ಲಿ ಯುದ್ಧ ಮಾಡಲಾರೆ, ಮಾಡದೆ ಇರಲಾರೆ, ಏನು ಮಾಡಬೇಕೆಂದು ಅರಿಯದವನಾಗಿದ್ದೇನೆ. ಯಾವುದಾದರೂ ಉಪಾಯ ಸೂಚಿಸಿ’ಎಂದಾಗ ದೇವೇಂದ್ರನ ವೇದನೆ ಅರಿತು ವಿಜಯ ಪ್ರಾಪ್ತಿಯಾಗಲು, ಶ್ರಾವಣಪೂರ್ಣಿಮೆ ದಿನ ರಕ್ಷಾವಿಧಾನವನ್ನು ಮಾಡಲು ಸೂಚಿಸಿದರು.
ಅದರಂತೆ ಇಂದ್ರಾಣಿಯು ಶ್ರಾವಣ ಪೂರ್ಣಿಮೆ ದಿನ, ಇಂದ್ರನಿಗೆ ಬೃಹ್ಮಸ್ಪತಿ ಆಚಾರ್ಯರಿಂದ ಸ್ಪಸ್ತಿವಾಚನ ಮಾಡಿಸಿ, ಅವರಿಂದ ರಕ್ಷಾಸೂತ್ರ ಪಡೆದು ಇಂದ್ರನ ಬಲಗೈಗೆ- ಯೇನ ಬದ್ಧೋ ಬಲೀರಾಜಾ ದಾನವೇಂದ್ರೋ ಮಹಾಬಲಃ ಭಾರತೀಯ ಪ್ರಾಚೀನ ಋುಷಿ-ಮಹರ್ಷಿಗಳು ಮನುಷ್ಯನ ಜೀವನದಲ್ಲಿ ಸುಖ-ಶಾಂತಿ ನೆಲೆಸಲು, ಉತ್ಕೃಷ್ಟಚಿಂತನೆ ನಡೆಸಿ, ಧರ್ಮಾಚರಣೆಯ ವಿಧಿವಿಧಾನಗಳನ್ನು ಸೂಚಿಸಿದರು.
ಅದರ ಒಂದು ಭಾಗವಾಗಿ ಹಬ್ಬ-ಹರಿದಿನಗಳ ಆಚರಣೆ ನಡೆದು ಬಂದಿದೆ. ಅದರಂತೆ ಶ್ರಾವಣ ಮಾಸದ ಹುಣ್ಣಿಮೆಯನ್ನು ನೂಲುಹುಣ್ಣಿಮೆ, ರಕ್ಷಾಬಂಧನ, ಉಪಾಕರ್ಮ ಮುಂತಾದ ಹೆಸರಿನಿಂದ ಆಚರಿಸುತ್ತೇವೆಭವಿಷ್ಯಪುರಾಣದ ಪ್ರಕಾರ ಹಿಂದೆ ದೇವ-ದಾನದವರಿಗೆ ಹನ್ನೆರಡು ವರ್ಷಗಳ ಕಾಲ ನಿರಂತರ ಯುದ್ಧ ನಡೆಯಿತು, ರಾಕ್ಷಸರು ದೇವತೆಗಳನ್ನು ಸೋಲಿಸಿ, ದೇವಲೋಕವನ್ನು ಆಕ್ರಮಿಸಿ, ದೇವತೆಗಳನ್ನು ಅಲ್ಲಿಂದ ಹೊರದಬ್ಬಿದರು.
ಮೂರುಲೋಕದ ಆಡಳಿತವನ್ನು ತಮ್ಮ ಕೈವಶ ಮಾಡಿಕೂಂಡ ದಾನವರು, ಮನುಷ್ಯರು ಯಾವುದೇ ಯಜ್ಞ-ಯಾಗಾದಿಗಳನ್ನು ಮಾಡಬಾರದೆಂದೂ, ತಮ್ಮನ್ನೇ ಪೂಜಿಸಬೇಕೆಂದರು. ಇದರ ಪರಿಣಾಮ ವೇದಪಠಣ-ಯಜ್ಞ- ಉತ್ಸವಾದಿಗಳು ನಿಂತವು, ಧರ್ಮನಾಶವಾಗಿ ದೇವತೆಗಳು ಕ್ಷೀಣಬಲರಾದಾಗ, ದೇವರಾಜ ಇಂದ್ರನು, ಗುರು ಬೃಹಸ್ಪತಿ ಆಚಾರ್ಯರಲ್ಲಿ ಹೀಗೆ ಪ್ರಾರ್ಥಿಸಿದ.