Advertisement

ನೌಕರರಿಂದ ಹರ್‌ ಘರ್‌ ತಿರಂಗಾ ಅಭಿಯಾನ

01:48 PM Aug 08, 2022 | Team Udayavani |

ದೊಡ್ಡಬಳ್ಳಾಪುರ: ಇಲ್ಲಿನ ಅಂಚೆ ಇಲಾಖೆಯ ನೌಕರರಿಂದ ಹರ್‌ ಘರ್‌ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

Advertisement

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, 75ನೇ ಸ್ವಾತಂತ್ರ್ಯ ದಿನಾ ಚರಣೆಯ ಹಿನ್ನೆಲೆ, ಹರ್‌ ಘರ್‌ ತಿರಂಗಾ ಅಭಿಯಾನ ನಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ.  ಈ ಅಭಿಯಾನದ ಮೂಲಕ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯ ಮನದಲ್ಲಿ ದೇಶ ಪ್ರೇಮದ ಭಾವನೆಯನ್ನು ಉಂಟು ಮಾಡಲು ಹರ್‌ ಘರ್‌ ತಿರಂಗಾ ಅಭಿ ಯಾನ ಸಹಕಾರಿಯಾಗಿದೆ. ರಾಷ್ಟ್ರೀಯ ಹೆಮ್ಮೆಯನ್ನು ಸಂಕೇತಿಸುವ ರಾಷ್ಟ್ರಧ್ವಜ ವನ್ನು ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ಹಾರಿಸುವ ಮೂಲಕ ಅಭಿಯಾನ ವನ್ನು ಯಶಸ್ವಿಗೊಳಿಸೋಣ ಎಂದರು.

ಮನೆ ಮೇಲೆ ಧ್ವಜ ಹಾರಿಸಿ: ದೊಡ್ಡಬಳ್ಳಾಪುರ ಅಂಚೆ ಕಚೇರಿಯ ಮುಖ್ಯಸ್ಥ ರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ರೂಪಿಸಿರುವ ಹರ್‌ ಘರ್‌ ತಿರಂಗಾ ಅಭಿಯಾನ ಆ.13, 14 ಮತ್ತು 15ರಂದು ನಡೆಯಲಿದೆ. ಈ ಅಭಿಯಾನದಲ್ಲಿ ಎಲ್ಲರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಪ್ರೇಮವನ್ನು ಮೂಡಿ ಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ತಾಲೂಕಿನ ವಿವಿಧ ಅಂಚೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next