Advertisement
ಈ ಕಾರ್ಯಕ್ರಮವನ್ನು ಕಾಟಾಚಾರಕ್ಕೆ ಮಾಡದೆ ದೇಶದ ಮೇಲಿನ ಅಭಿಮಾನ, ಪ್ರೀತಿಯಿಂದ ಆಯೋಜಿಸಬೇಕು. ಅರ್ಥಪೂರ್ಣವಾಗಿ ಆಚರಿಸ ಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸ ಬೇಕು ಎಂದು ಸೋಮವಾರ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಅವರು, ಅಧಿಕಾರಿಗಳಿಗೆ ಸಲಹೆ ನೀಡಿದರು.
Related Articles
Advertisement
ಇದರೊಂದಿಗೆ ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ ಆ. 9ರಿಂದ 14ರ ನಡುವೆ ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸಮ್ಮಾನಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಇದರಲ್ಲಿ ಭಾಗಿಯಾಗುವಂತೆ ಸೂಚಿಸಿದರು.
ಸಿಎಂ ಸೂಚನೆಯೇನು?-ಸರಕಾರಿ ಕಚೇರಿಗಳಲ್ಲಿ ಆ. 13ರಿಂದ
15ರ ವರೆಗೆ ಪ್ರತೀ ದಿನ ಬೆಳಗ್ಗೆ ಧ್ವಜಾ ರೋಹಣ ಮಾಡಿ, ಸಂಜೆ ಇಳಿಸಬೇಕು.
-ಮನೆಗಳಲ್ಲಿ ಆಗಸ್ಟ್ 13ರಂದು ಧ್ವಜಾ ರೋಹಣ ಮಾಡಿ, 15ರ ವರೆಗೆ ಇರಿಸಬಹುದು.
-ಆ. 9ರಿಂದ 14ರ ವರೆಗೆ
ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸಮ್ಮಾನಿಸಬೇಕು.