Advertisement

ಸಾಮಾಜಿಕ ಜಾಲತಾಣದಲ್ಲಿ ಹರ್ ಘರ್ ತಿರಂಗ ಟ್ರೆಂಡಿಂಗ್, ಗಣ್ಯರ ಮನೆಗಳಲ್ಲಿ ಹಾರಿದ ತ್ರಿವರ್ಣ

03:40 PM Aug 13, 2022 | Team Udayavani |

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13 ರಿಂದ 15 ರ ವರೆಗೆ ಮನೆ-ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನ ಶುರುವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಸೇರಿದಂತೆ ಹಲವು ಗಣ್ಯರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.

Advertisement

ಈ ಸಂಬಂಧ ಫೋಟೋಗಳನ್ನು ಆಜಾದಿ ಕಾ ಅಮೃತಮಹೋತ್ಸವ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ:ಬೀಚ್‌ನಲ್ಲಿ ಮಹಿಳೆಗೆ ಮಾರಕವಾದ ಛತ್ರಿ: ವಾರ್ಷಿಕವಾಗಿ 3 ಸಾವಿರ ಜನರಿಗೆ ಗಾಯ

ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ “ಮನೆ ಮನೆಯಲ್ಲೂ ತ್ರಿವರ್ಣ ಧ್ವಜ” ಅಭಿಯಾನದ ಅಂಗವಾಗಿ ಅವರ ನಿವಾಸದ ಮೇಲೆ ಕುಟುಂಬ ಸದಸ್ಯರೊಂದಿಗೆ ರಾಷ್ಟ್ರ ಧ್ವಜ ಹಾರಿಸಿದರು ಎಂದು ಬಿಜೆಪಿ ಹೇಳಿದೆ.

Koo App

ಮನೆ ಮನೆಯಲ್ಲೂ ರಾಷ್ಟ್ರ ಧ್ವಜ, ಮನ ಮನದಲ್ಲೂ ರಾಷ್ಟ್ರ ಪ್ರೇಮ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸ್ವಗೃಹದಲ್ಲಿಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ಸಲ್ಲಿಸಲಾಯಿತು. ಎಲ್ಲರೂ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನಕ್ಕೆ ಕೈ ಜೋಡಿಸಿ, ಸ್ವಾತಂತ್ರ್ಯದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಸಚಿವ ಅಶ್ವಥ್ ನಾರಾಯಣ ಕೂ ಮಾಡಿದ್ದಾರೆ.

Koo App

ಮನೆ ಮನೆಯಲ್ಲೂ ರಾಷ್ಟ್ರ ಧ್ವಜ, ಮನ ಮನದಲ್ಲೂ ರಾಷ್ಟ್ರ ಪ್ರೇಮ. #ಸ್ವಾತಂತ್ರ್ಯದಅಮೃತಮಹೋತ್ಸವ ಅಂಗವಾಗಿ ಸ್ವಗೃಹದಲ್ಲಿಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ಸಲ್ಲಿಸಲಾಯಿತು. ಎಲ್ಲರೂ #ಮನೆಮನೆಯಲ್ಲೂತ್ರಿವರ್ಣಧ್ವಜ ಅಭಿಯಾನಕ್ಕೆ ಕೈ ಜೋಡಿಸಿ, ಸ್ವಾತಂತ್ರ್ಯದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಜೈ ಹಿಂದ್‌! @BJP4Karnataka @pmoind @CMOKarnataka @nalinkumarkateel @bsybjp

Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 13 Aug 2022

Advertisement

Udayavani is now on Telegram. Click here to join our channel and stay updated with the latest news.

Next