Advertisement

ವೇತನ ನೀಡದಿದ್ದರೆ ನೌಕರರ ಆತ್ಮಹತ್ಯೆ ಬೆದರಿಕೆ

05:45 PM Jul 09, 2020 | Naveen |

ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮ ಪಂಚಾಯತಿ ನೌಕರರು ಕೂಡಲೇ ವೇತನ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಾಪಂ ಇಒ ಅನಂತರಾಜು ಅವರಿಗೆ ತಿಳಿಸಿದ್ದಾರೆ.

Advertisement

ಪಂಚಾಯ್ತಿಯಲ್ಲಿ ಪಿಡಿಒ ಮತ್ತು ಸಹಾಯಕರನ್ನು ಕೂಡಿ ಹಾಕಿ ದಿನಗೂಲಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಇಒ ಅನಂತರಾಜು ಅವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೂಡಲೇ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಊರಿನ ಜನರಿಗೆ ಕುಡಿಯಲು ನೀರಿಲ್ಲ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನಾನೂಕೂಲವಾಗಿದೆ. ಅಭಿವೃದ್ಧಿ ಅಧಿಕಾರಿ ಮಹಮ್ಮದ್‌ ಹುಸೇನ್‌ ದೌರ್ಜನ್ಯ ಹಾಗೂ ದುರಾಡಳಿತದಿಂದ ಬೇಸತ್ತು ಹೋಗಿದ್ದೇವೆ ಎಂದು ಆಪಾದಿಸಿದ್ದಾರೆ.

ಪಿಡಿಒ ಮತ್ತು ಸಹಾಯಕನನ್ನು ಕೂಡಿ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಂಸದ ವೈ.ದೇವೇಂದ್ರಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಒಂದೆರಡು ದಿನಗಳಲ್ಲಿ ಸಿಬ್ಬಂದಿಗೆ ಸಂಬಳ ನೀಡಲು ಮೇಲಧಿಕಾರಿಗೆ ಸೂಚನೆ ನೀಡುತ್ತೇನೆ. ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದ್ದರು. ಈ ಸಂದರ್ಭದಲ್ಲಿ ನೌಕರರರಾದ ನಾಗರಾಜ್‌, ಶಶಿಕುಮಾರ್‌, ಸುನೀಲ್‌ ಕುಮಾರ್‌, ಮಂಜಪ್ಪ, ಕಣುವಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next