ಹರಪನಹಳ್ಳಿ: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿ ರೈತನೊಬ್ಬ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಪ್ಪನಾಯಕನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
Advertisement
ಓಬಳಪುರ ನಿಂಗಪ್ಪ (48) ಮೃತ ದುರ್ದೈವಿ, ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹಾವು ಕಚ್ಚಿದೆ, ತಕ್ಷಣ ಅಲ್ಲಿದ್ದವರು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದ್ಯೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸಿದರಾದರೂ ಚಿಕಿತ್ಸೆ ಫಲಿಸದೆ ರೈತ ಮೃತಪಟ್ಟಿದ್ದಾರೆ.
ಈ ಸಂಬಂಧ ಚಿಗಟೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.