Advertisement

ಪರೀಕ್ಷಾ ಕೇಂದ್ರ ತೆರೆಯಲು ಪೂಜಾರ್‌ ಒತ್ತಾಯ

03:47 PM Jun 07, 2020 | Team Udayavani |

ಹರಪನಹಳ್ಳಿ: ಹೊರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಹರಪನಹಳ್ಳಿಯಲ್ಲಿ ಎಸ್‌ ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ತೆರೆಯುವ ಮೂಲಕ ಇಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿ ನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿ ಕೊಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್‌ ಅವರಿಗೆ ಕಾಂಗ್ರೆಸ್‌ ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿ ಸದಸ್ಯ ಶಶಿಧರ್‌ ಪೂಜಾರ್‌ ಒತ್ತಾಯಿಸಿದ್ದಾರೆ.

Advertisement

ಸರ್ಕಾರ ಮತ್ತು ಖಾಸಗಿ ಬಸ್‌ ಮಾಲೀಕರ ಸಂಘದ ಹಗ್ಗ ಜಗ್ಗಾಟದಲ್ಲಿ ಖಾಸಗಿ ಬಸ್‌ಗಳು ರಸ್ತೆಗೆ ಇಳಿಯುತ್ತಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವೂ ನಾಮಕಾವಸ್ಥೆ ಆಗಿದೆ. ಬೆಳಗ್ಗೆ 9:30ಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಸುಮಾರು 130 ರಿಂದ 170 ಕಿಲೋಮೀಟರ್‌ ದೂರದಲ್ಲಿರುವ ಬಳ್ಳಾರಿ ಜಿಲ್ಲಾ ಕೇಂದ್ರಕ್ಕೆ ಪ್ರಯಾಣ ಬೆಳೆಸಿ ಪರೀಕ್ಷೆ ಬರೆಯುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿಗಳ ಅನುಕೂಲದ ಹಿತ ದೃಷ್ಟಿಯಿಂದ 50 ಕಿಲೋಮೀಟರ್ ಅಂತರದಲ್ಲಿ ಒಂದು ಪರೀಕ್ಷಾ ಕೇಂದ್ರ ತೆರೆಯಬೇಕೆನ್ನುವ ಶಿಕ್ಷಣ ಇಲಾಖೆಯ ಪರೀಕ್ಷಾ ನಿಯಮದಲ್ಲೇ ಇದೆ. ಅದರಂತೆ ಅತಿ ಹೆಚ್ಚು ಶಾಲಾ ಕಾಲೇಜುಗಳಿದ್ದು, ಕೊಠಡಿಗಳಿಗೆ ಕೊರತೆಯೇ ಇಲ್ಲದ ಹರಪನಹಳ್ಳಿಯಲ್ಲಿ ಪರೀಕ್ಷಾ ಕೇಂದ್ರ ತೆರೆದರೆ ಸುತ್ತ ಮುತ್ತಲಿನ ಹಡಗಲಿ, ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಸಹ ಅನುಕೂಲವಾಗುತ್ತದೆ. ಅಲ್ಲದೇ ಬಡ ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಆರ್ಥಿಕ ಹೊರೆಯನ್ನು ಇಳಿಸಿದಂತಾಗಿ ಅವರ ಕಲಿಕೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಹೀಗಾಗಿ ಪರೀಕ್ಷಾ ಕೇಂದ್ರವನ್ನು ಹರಪನಹಳ್ಳಿಯಲ್ಲಿಯೇ ತೆರೆಯುವಂತೆ ಬಳ್ಳಾರಿಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next